Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಂತಿ ಸಭೆಗಳು ಹಬ್ಬಗಳಿಗೆ...

ಶಾಂತಿ ಸಭೆಗಳು ಹಬ್ಬಗಳಿಗೆ ಸೀಮಿತವಾಗದಿರಲಿ: ಪೊಲೀಸ್ ಆಯುಕ್ತರಿಗೆ ಸಾರ್ವಜನಿಕರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ13 Jun 2018 6:37 PM IST
share
ಶಾಂತಿ ಸಭೆಗಳು ಹಬ್ಬಗಳಿಗೆ ಸೀಮಿತವಾಗದಿರಲಿ: ಪೊಲೀಸ್ ಆಯುಕ್ತರಿಗೆ ಸಾರ್ವಜನಿಕರ ಒತ್ತಾಯ

ಮಂಗಳೂರು, ಜೂ.13: ಹಬ್ಬ ಹರಿದಿನಗಳ ಮೊದಲು ಶಾಂತಿಸಭೆಗಳನ್ನು ಏರ್ಪಡಿಸಲಾಗುತ್ತದೆ. ಶಾಂತಿಸಭೆಗಳು ಹಬ್ಬಗಳಿಗಾಗಿ ಸೀಮಿತವಾಗಬಾರದು. ವರ್ಷಕ್ಕೆ ಇಂತಹ ಹಲವು ಶಾಂತಿಸಭೆಗಳನ್ನು ಹಮ್ಮಿಕೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ಸಾರ್ವಜನಿಕರು ಮನವಿ ಮಾಡಿದರು.

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಶಾಂತಿಸಭೆಯಲ್ಲಿ ಸೌಹಾರ್ದ, ಸಾರಿಗೆ, ಸಂಚಾರ, ಪಾರ್ಕಿಂಗ್ ಮತ್ತಿತರ ವಿಷಯಗಳ ಕುರಿತ ಚರ್ಚೆ ನಡೆಸಲಾಯಿತು.

ಕೆ.ಎಂ. ಮುಹಮ್ಮದ್ ಇಬ್ರಾಹೀಂ ಮಾತನಾಡಿ, ದ.ಕ. ಜಿಲ್ಲೆ ಸೌಹಾರ್ದಯುತ ಪ್ರದೇಶವಾಗಿದೆ. ಆದರೆ ಕಣ್ಣೂರು, ಅಡ್ಯಾರ್‌ಪದವುಗಳಲ್ಲಿ ಇತ್ತೀಚೆಗೆ ಮಸೀದಿಗೆ ಕಲ್ಲು ತೂರಿ, ಗಲಾಟೆ ನಡೆದಿತ್ತು. ಇಂತಹ ಘಟನೆ ಮುಂದಿನ ದಿನಗಳಲ್ಲಿ ನಡೆಯದಂತೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ವಿಪುಲ್‌ಕುಮಾರ್, ಖಂಡಿತವಾಗಿ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

‘ಪೊಲೀಸ್ ಸಿಬ್ಬಂದಿಯಿಂದ ಶೇ.100ರಷ್ಟು ಕೆಲಸ ಮಾಡುವ ಭರವಸೆಯನ್ನು ಇಲಾಖೆ ನೀಡುತ್ತದೆ. ಮೇಲಾಧಿಕಾರಿಯಾಗಿ ತನಗೆ ಭರವಸೆಯಿದೆ. ಒಳ್ಳೆಯ ಕೆಲಸ ಮಾಡುವಾಗ ತಪ್ಪಾಗುವುದು ಶೇ.1ರಷ್ಟು ಇರಬಹುದು. ಆದರೆ ಬೇಕೆಂದೇ ಪೊಲೀಸರಿಂದ ತಪ್ಪು ಕ್ರಮ ಕಂಡುಬಂದಲ್ಲಿ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು’ ಎಂದು ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ತಾಕೀತು ಮಾಡಿದರು.

‘ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಗಳ ವಿರುದ್ಧ ಅವಹೇಳನಕಾರಿ ಹೇಳಿಕೆ, ಫೋಟೋ-ಮಾಹಿತಿಗಳ ವಿರುದ್ಧ ಎಚ್ಚರಿಕೆ ವಹಿಸಬೇಕು. ಪೊಲೀಸ್ ಇಲಾಖೆ ಇವುಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಇಂತಹ ಪೋಸ್ಟ್‌ಗಳು ಹಲವಾರು ಮಂದಿಗೆ ಕೆಲವೇ ಕ್ಷಣಗಳಿಗೆ ಹಲವಾರು ಮಂದಿಗೆ ತಲುಪುತ್ತದೆ. ಇದಕ್ಕೆ ತಡೆವೊಡ್ಡಬೇಕೆಂದು ಸಾರ್ವಜನಿಕರೋರ್ವರು ಆಯುಕ್ತರಲ್ಲಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಆಯಕ್ತರು, ಸಾಮಾಜಿಕ ಜಾಲತಾಣಗಳಲ್ಲಿ ಭಾವನೆಗೆ ಧಕ್ಕೆ ತರುವ ಯಾವುದೇ ಸಂದೇಶಗಳನ್ನು ಬೇರೆಯವರಿಗೆ ಕಳುಹಿಸಿದರೆ ಕಾನೂನು ವಿರೋಧಿ ಕ್ರಮವಾಗುತ್ತದೆ. ಇತ್ತೀಚೆಗೆ ಇಂತಹ ಎರಡು ಪ್ರಕರಣಗಳಲ್ಲಿ ಅಂತಹವರನ್ನು ಬಂಧಿಸಲಾಗಿದೆ. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಮಾತನಾಡಿ, ರಮಝಾನ್ ಆಚರಣೆ ದಿನಾಂಕವನ್ನು ಚಂದ್ರದರ್ಶನದ ಬಳಿಕವೇ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದರು.

ಶಾಂತಿಸಭೆಯಲ್ಲಿ ಡಿಸಿಪಿ ಹನುಮಂತರಾಯ, ಎಸಿಪಿಗಳಾದ ಜಗದೀಶ್, ರಾಜೇಂದ್ರ, ಮಂಜುನಾಥ್ ಉಪಸ್ಥಿತರಿದ್ದರು. ಪೌಲ್ ಮೆಲ್ವಿನ್ ಡಿಸೋಜ, ಫಾ.ವಿಜಯ ಮಚ್ಛಾದೋ, ಕಾರ್ಪೋರೇಟರ್ ಪ್ರೇಮಾನಂದ ಮತ್ತಿತರರು ಶಾಂತಿಸಭೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X