ಮಕ್ಕಳ ರಾಷ್ಟ್ರಮಟ್ಟದ ಅಸಾಧಾರಣ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಜೂ.13: ಕಲೆ, ಸಾಂಸ್ಕೃತಿಕ, ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೋಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಯನ್ನು ಭಾರತ ಸರಕಾರ ನೀಡುತ್ತಿದೆ.
ಭಾರತದಲ್ಲಿ ನೆಲೆಸಿರುವ 5ರಿಂದ 18 ವರ್ಷದೊಳಗಿನ ಮಕ್ಕಳನ್ನು 2018ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ಒಂದು ಚಿನ್ನದ ಪದಕ, 20,000ರೂ. ನಗದು, ರೂ.10000 ವೌಲ್ಯದ ಪುಸ್ತಕ ವೋಚರ್ ಮತ್ತು ಪ್ರಶಸ್ತಿ ಪತ್ರ ಹಾಗೂ 35 ಬೆಳ್ಳಿ ಪದಕ (ಪ್ರತಿ ರಾಜ್ಯ/ ಕೇಂದ್ರಾಡಳಿತ ಪ್ರದೇಶಕ್ಕೆ ಒಂದು ಬೆಳ್ಳಿ ಪದಕ) ರೂ.10,000 ನಗದನ್ನು ಹೊಂದಿದೆ.
ಈ ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳ ವರಾಗಿದ್ದು, ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲೆಗಳನ್ನು ಒದಗಿಸಬೇಕು. ಪ್ರಸ್ತುತ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇಲ್ಲಿಂದ ಪಡೆದು ಆಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ಭರ್ತಿ ಮಾಡಿ ಜೂ.30 ರೊಳಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ: 0820-2574972 ಗೆ ಸಂಪರ್ಕಿಸುವಂತೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ ಇವರ ಪ್ರಕಟಣೆ ತಿಳಿಸಿದೆ.