ಉಡುಪಿ: ಪರಿಸರ ದಿನಾಚರಣೆಗೆ ಸಸಿ ನೆಡುವ ಕಾರ್ಯಕ್ರಮ
ಉಡುಪಿ, ಜೂ.13: ಕರ್ನಾಟಕ ರಾಜ್ಯ ಅರಣ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಜೂ.14ರಂದು ಬೆಳಗ್ಗೆ 9:30ಕ್ಕೆ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಆಯುರ್ವೇದ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ ಉದ್ಘಾಟಿಸಲಿರುವರು. ಪ್ರಾಂಶುಪಾಲ ಡಾ.ಜಿ.ಶ್ರೀನಿವಾಸ್ ಆಚಾರ್ಯ ಅಧ್ಯಕ್ಷತೆ ವಹಿಸಲಿರುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಲತಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Next Story





