ಯುವಕ ಕಾಣೆ

ಮಂಗಳೂರು, ಜೂ.13: ನಗರದ ವಳಚ್ಚಿಲ್‌ನಲ್ಲಿ ರಸ್ತೆಯ ಕಾಂಕ್ರಿಟ್ ಕೆಲಸ ಮಾಡಿಕೊಂಡಿದ್ದ ಯಾದಗಿರಿ ಜಿಲ್ಲೆಯ ಪಾಳು ನಾಯಕ (28) ಎಂಬಾತ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜೂ.4ರಂದು ಮಧ್ಯಾಹ್ನ 1 ಗಂಟೆಗೆ ತನ್ನ ಊರಾದ ಯಾದಗಿರಿಗೆ ಹೋಗುವುದಾಗಿ ಹೇಳಿ ಹೋದವನು ಯಾದಗಿರಿಗೂ ಹೋಗದೆ ಇತ್ತ ವಾಪಾಸು ಕೆಲಸಕ್ಕೂ ಬಾರದೆ ನಾಪತ್ತೆಯಾಗಿದ್ದಾನೆ ಎಂದು ಲಕ್ಷಣ ಎಂಬರರು ದೂರು ನೀಡಿದ್ದಾರೆ.
ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಮತ್ತು ಲಂಬಾಣಿ ಭಾಷೆ ಮಾತನಾಡಬಲ್ಲವರಾಗಿದ್ದಾರೆ. ಬಲಕೈಯಲ್ಲಿ ಸುಟ್ಟ ಗಾಯ ಇದ್ದು, ನೀಲಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿರುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಿದವರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.
Next Story





