ಜು.1ರಂದು ಮಾಸ್ತಿ ಪ್ರಶಸ್ತಿ ಪ್ರದಾನ
ಬೆಂಗಳೂರು, ಜೂ.13: ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ 127ನೇ ಸಂಸ್ಮರಣ ವರ್ಷದ ಅಂಗವಾಗಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ ವತಿಯಿಂದ 26ನೇ ವರ್ಷದ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಐವರು ಲೇಖಕರು 2018ನೇ ಸಾಲಿನ ಪ್ರತಿಷ್ಠಿತ ‘ಮಾಸ್ತಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಡಾ. ಕೆ.ವಿ. ತಿರುಮಲೇಶ್ (ಕಾವ್ಯ), ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯಂ(ವಿಮರ್ಶೆ), ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ (ಕಾವ್ಯ), ಡಾ. ಬಿ.ಎಲ್. ವೇಣು (ಸೃಜನಶೀಲ) ಹಾಗೂ ಪ್ರೊ. ಎಂ.ಆರ್. ಕಮಲ (ಕಾವ್ಯ) ಪ್ರಸಕ್ತ ಸಾಲಿನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜು.1ರಂದು ಭಾರತೀಯ ವಿದ್ಯಾಭವನದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 25 ಸಾವಿರ ನಗದು, ಮಾಸ್ತಿ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಪ್ರಕಟನೆ ತಿಳಿಸಿದೆ.
Next Story





