ಮಡಿಕೇರಿ: ಗುಂಡು ಹಾರಿಸಿ ವ್ಯಕ್ತಿ ಆತ್ಮಹತ್ಯೆ

ಮಡಿಕೇರಿ, ಜೂ.13: ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಾಪೋಕ್ಲು ಸಮೀಪದ ಪೇರೂರು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಮಚ್ಚುರ ಪವನ್ ಮಂದಣ್ಣ (67) ಎಂಬವರೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಕೋವಿಯಿಂದ ಮುಖದ ಭಾಗಕ್ಕೆ ಗುಂಡು ಹಾರಿಸಿಕೊಂಡಿದ್ದು, ಗಾಯಾಳುವನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ಮೃತ ಪವನ್ ಮಂದಣ್ಣ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





