ಮಡಿಕೇರಿ: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಮಡಿಕೇರಿ, ಜೂ.13: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಹಚ್ಚಿನಾಡು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಚಿಟ್ಟಿಚ್ಚ ಎಂಬವರ ಪತ್ನಿ ಸಿ.ರೂಪ ಅವರೇ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.
ಈ ಸಂಬಂಧ ಮೃತರ ತಾಯಿ ಚೊಟ್ಟೆಕಾಳಪಂಡ ಎಂ. ಅಕ್ಕಮ್ಮ ಅವರು ನೀಡಿದ ದೂರಿನ ಮೇರೆಗೆ ಸಿದ್ಧಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





