Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಭಾರೀ ಮಳೆಗೆ ಜನಜೀವನ...

ಬೆಳ್ತಂಗಡಿ: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥ; ಎರಡು ಮನೆ ಕುಸಿತ

ವಾರ್ತಾಭಾರತಿವಾರ್ತಾಭಾರತಿ14 Jun 2018 5:55 PM IST
share
ಬೆಳ್ತಂಗಡಿ: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥ; ಎರಡು ಮನೆ ಕುಸಿತ

ಬೆಳ್ತಂಗಡಿ, ಜೂ. 14: ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಜನಜೀವನ ಅಸ್ತವ್ಯಸ್ಥಗೊಂಡಿದೆ. ತಾಲೂಕಿನಲ್ಲಿ ಎರಡು ಮನೆಗಳು ಸಂಪೂರ್ಣ ಕುಸಿದಿದೆ. ಸುಮಾರು ಹತ್ತಕ್ಕೂ ಹೆಚ್ಚು ಮನೆಗಳ ಮೇಲೆ ಮಣ್ಣು ಕುಸಿದು ಬಿದ್ದಿದೆ. ಅಲ್ಲಲ್ಲಿ ಮಣ್ಣು ಕುಸಿದು ಬಿದ್ದಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ. ನೆರೆ ಭೀತಿಯಿಂದ ಆರಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ನೇತ್ರಾವತಿ, ಫಲ್ಗುಣಿ ಸೇರಿದಂತೆ ಬಹುತೇಕ ನದಿಗಳು ಹಾಗೂ ತೊರೆಗಳು ತುಂಬಿ ಹರಿಯುತ್ತಿದ್ದು ಬೆಳಗ್ಗೆ ಬಹುತೇಕ ಕಿರು ಸೇತುವೆಗಳು ಮುಳುಗಡೆಯಾಗಿದ್ದವು. ಶಾಲಾ ಕಾಲೇಜುಗಳಿಗೆ ಗುರುವಾರ ಮತ್ತೆ ರಜೆ ನೀಡಲಾಗಿತ್ತು.

ನಾವೂರು ಗ್ರಾಮದ ಎಂಬಲ್ಲಿ ಎರಡು ಮನೆಗಳು ಸಂಪೂರ್ಣ ಕುಸಿದು ಬಿದ್ದಿದೆ. ಇಂದಬೆಟ್ಟು ಐದುಸೆನ್ಸ್ ನಿವಾಸಿ ಫಾತಿಮಾ ಅವರ ಮನೆಯ ಹಿಂಬಾಗ ಕುಸಿದುಬಿದ್ದಿದೆ. ಮನೆ ಸಂಪೂರ್ಣ ಕುಸಿಯುವ ಭೀತಿಯಲ್ಲಿದೆ. ಇಂದಬೆಟ್ಟು ಗ್ರಾಮದ ಮಹಮ್ಮದ್ ಹನೀಫ್ ಎಂಬವರ ಮನೆಯ ಗೋಡೆ ಕುಸಿದು ಬಿದ್ದಿದ್ದು ಮನೆ ಸಂಪೂರ್ಣ ನೆಲಕಚ್ಚುವ ಭಿತಿಯಲ್ಲಿದೆ. ಮನೆಯವರನ್ನು ಬೇರೆ ಮನೆಗೆ ಸ್ಥಳಾಂತರಿಸಲಾಗಿದೆ.

ಲಾಯಿಲ ಗ್ರಾಮದ ಕಾವಟ್ಟೆ ನಿವಾಸಿ ನಟರಾಜ್ ಎಂಬವರ ಮನೆಯ ಹಿಂಬಾಗದ ಗುಡ್ಡ ಕುಸಿದಿದ್ದು ಮನೆಗೆ ಹಾನಿಯಾಗಿದೆ. ಮನೆಯೊಳಗೆ ಮಣ್ಣು ಮತ್ತು ನೀರು ನುಗ್ಗಿದ್ದು ಅಲ್ಲೋಲಕಲ್ಲೋಲವಾಗಿದೆ. ಗುಡ್ಡ ಮತ್ತೆ ಕುಸಿಯುತ್ತಿದ್ದು ಅಪಾಯಕಾರಿ ಸ್ಥಿತಿಯಿದೆ. ಲಾಯಿಲ ಅಂತಾಜೆ ಬಳಿ ಉಮೇಶ್ ಎಂಬವರ ಮನೆಯ ಮೇಲೆ ಗುಡ್ಡ ಕುಸಿದುಬಿದ್ದು ಹಾನಿಯಾಗಿದೆ. ಮನೆಯ ಹಿಂಬಾಗದಲ್ಲಿ ಮರಗಳು ಮುರಿದು ಬೀಳುವ ಸ್ಥಿತಿಯಲ್ಲಿದ್ದು ಅದನ್ನು ತೆರವುಗೊಳಿಸಲಾಗುತ್ತಿದೆ. ಲಾಯಿಲ ಗ್ರಾಮದಲ್ಲಿ ಪ್ರಕಾಶ, ರಮೇಶ್ ಹಾಗೂ ಲಲಿತ ಅವರ ಮನೆಗಳ ಹಿಂಬಾಗದಲ್ಲಿ ಭೂಕುಸಿತವಾಗಿದ್ದು ಅಪಾಯಕಾರಿ ಸ್ಥಿತಿಯಿದೆ.

ಗುರುವಾಯನಕೆರೆಯಲ್ಲಿ ಕೆರೆ ತುಂಬಿದ್ದು ನೀರು ಹರಿಯುವ ಚಾನೆಲ್ ಬ್ಲಾಕ್ ಆಗಿದ್ದು ಕೆರೆಯ ನೀರು ಪೇಟೆಯ ಚರಂಡಿಯಮೂಲಕ ಹರಿಯುತ್ತಿದ್ದು ಗುರುವಾಯನಕೆರೆ ಬಂಟರ ಭವನ ಸಮೀಪ ರಸ್ತೆ ಬ್ಲಾಕ್ ಆಗಿದೆ. ರಸ್ತೆಯಲ್ಲಿ ನೀರು ತುಂಬಿ ಹರಿಯುತ್ತಿದೆ. ಅದರೊಂದಿಗೆ ತೊರೆಯ ನೀರೂ ರಸ್ತೆಗೆ ನುಗ್ಗುತ್ತಿದ್ದು ಕೆಲ ಮನೆಗಳಿಗೆ ನೀರು ನುಗ್ಗಿದೆ.

ಆರು ಕುಟುಂಬಗಳ ಸ್ಥಳಾಂತರ: ಲಾಯಿಲ ಗ್ರಾಮದ ಗಾಂಧೀನಗರದಲ್ಲಿ ಆರು ಮನೆಗಳಿಗೆ ನದಿ ನೀರು ನುಗ್ಗಿದ್ದು ಆ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ವಸಂತಿ, ಜಗನ್ನಾಧ, ಚಂದ್ರಶೇಖರ, ಶಾರದ, ಜನಾರ್ಧನ ಹಾಗೂ ಶ್ರೀಧರ ಎಂಬವರ ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದೆ. ಇವರ ಮನೆಗಳಿಗೆ ಬೆಳ್ತಂಗಡಿ ನದಿಯ ನೀರು ನುಗ್ಗಿದ್ದು ಮನೆಗಳು ಬಿರುಕುಬಿಟ್ಟಿದೆ. ಈ ಎಲ್ಲ ಕುಟುಂಬಗಳು ದಲಿತಸಮುದಾಯಕ್ಕೆ ಸೇರಿದವರಾಗಿದ್ದಾರೆ. ಈ ಕುಟುಂಬಗಳನ್ನು ಸ್ಥಳಾಂತರಿಸುವ ಬಗ್ಗೆ ಕಳೆದ ಮೂರು ವರ್ಷಗಳಿಂದ ಪ್ರಸ್ತಾವನೆಗಳಿದ್ದರೂ ಅದು ಇನ್ನೂ ಕಾರ್ಯರೂಪಕ್ಕೆ ಬರಲಿಲ್ಲ. ಇಲ್ಲಿಗೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಈ ಆರು ಕುಟುಂಬಗಳಿಗೆ ಈಗಾಗಲೆ ಮಂಜೂರಾಗಿರುವ ಸೈಟ್‌ಗಳಲ್ಲಿ ಮನೆ ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ಬಗ್ಗೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪೇಟೆಗೆ ನುಗ್ಗಿದ ಫಲ್ಗುಣಿ ನದಿ:  ವೇಣೂರಿನಲ್ಲಿ ಫಲ್ಗುಣಿ ನದಿ ಪೇಟೆಗೆ ನುಗ್ಗಿ ಹರಿಯುತ್ತಿದೆ. ವೇಣೂರು ಪೇಟೆ ಸಂಪೂರ್ಣ ಜಲಾವೃತವಾಗಿದ್ದು, ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ಸೇತುವೆಯ ಮೇಲೆ ನೀರು ಹರಿಯುತ್ತಿದ್ದು ವಾಹನಸಂಚಾರಕ್ಕೆ ಅಡೆತಡೆಯುಂಟಾಗಿತ್ತು. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿಂಬಾಗದಲ್ಲಿ ಆವರಣ ಗೋಡೆ ಕುಸಿದು ಬಿದ್ದಿದೆ.

ಲಾಯಿಲ-ಪಟ್ಲಾಡಿ ರಸ್ತೆಗೆ ಗುಡ್ಡ ಕುಸಿದು ಬಿದ್ದು ವಾಹನಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಸುತ್ತಿಬಳಸಿ ಓಡಾಡಬೇಕಾಗಿ ಬಂದಿದೆ. ಇಲ್ಲಿ ಗುಡ್ಡ ಮತ್ತಷ್ಟು ಕುಸಿಯುವ ಭೀತಿಯಿದೆ.

ಶಾಸಕರ ಭೇಟಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಳೆಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ್ದು ಪರಿಶೀಲನೆ ನಡೆಸಿ ಸಂತ್ರಸ್ಥರಿಗೆ ಸ್ವಾಂತನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದಾಗಿ ಹೆಚ್ಚಿನ ಹಾನಿಯಾಗಿದ್ದು ತಾಲೂಕಿಗೆ ಪ್ರಕೃತಿ ವಿಕೋಪದ ಹಿನ್ನಲೆಯಲ್ಲಿ ಕೂಡಲೇ ಹತ್ತುಕೋಟಿ ರೂ ಮಂಜೂರುಗೊಳಿಸಬೇಕು ಎಂದು ಒತ್ತಾಯಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳೂ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಕೂಡಲೇ ಪರಿಹಾರಕಾರ್ಯಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X