ಬಂಟ್ವಾಳ: ಅಕ್ರಮ ಕಸಾಯಿಖಾನೆ ಆರೋಪ: ಆರು ಮಂದಿ ಸೆರೆ

ಬಂಟ್ವಾಳ, ಜೂ. 14: ಅಕ್ರಮ ಕಸಾಯಿಖಾನೆ ನಡೆಸಲಾಗುತ್ತಿದೆ ಎಂಬ ಆರೋಪದ ಮೇರೆಗೆ ಬಂಟ್ವಾಳ ಪೋಲೀಸರು ದಾಳಿ ನಡೆಸಿ, ಒಂದು ದನವನ್ನು ವಶಕ್ಕೆ ಪಡೆದುಕೊಂಡು, ಆರು ಮಂದಿಯನ್ನು ಬಂಧಿಸಿದ ಘಟನೆ ಲೊರೆಟ್ಟೋ ಸಮೀಪದ ಟಿಪ್ಪು ನಗರ ಎಂಬಲ್ಲಿ ಗುರುವಾರ ನಡೆದಿದೆ.
ಲೊರೆಟ್ಟು ನಿವಾಸಿಗಳಾದ ಆದಂ, ಅಹ್ಮದ್ ಬಾವ, ನಾಸೀರ್, ಮುಹಮ್ಮದ್ ಮುಸ್ತಾಫ, ನಾಸೀರ್ ಹುಸೈನ್, ಲತೀಫ್ ಎಂಬವರು ಬಂಧಿತರು. ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ಟಿಪ್ಪುನಗರದಲ್ಲಿರುವ ಆದಂ ಎಂಬವರ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ವಧೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





