Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸವಾಲುಗಳನ್ನು ಧನಾತ್ಮಕವಾಗಿ ಎದುರಿಸಿ:...

ಸವಾಲುಗಳನ್ನು ಧನಾತ್ಮಕವಾಗಿ ಎದುರಿಸಿ: ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್

ದ.ಕ. ಜಿಲ್ಲೆಯಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ವಾರ್ತಾಭಾರತಿವಾರ್ತಾಭಾರತಿ15 Jun 2018 10:00 AM IST
share
ಸವಾಲುಗಳನ್ನು ಧನಾತ್ಮಕವಾಗಿ ಎದುರಿಸಿ: ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್

ಮಂಗಳೂರು, ಜೂ.15: ಮುಸ್ಲಿಂ ಸಮಾಜ ಹಿಂದೆಯೂ ಹಲವಾರು ಸಮಸ್ಯೆ, ಸವಾಲುಗಳನ್ನು ಎದುರಿಸಿದೆ. ಈಗಲೂ ಎದುರಿಸುತ್ತಿದೆ. ಅವುಗಳನ್ನೆಲ್ಲಾ ಪರೀಕ್ಷೆಯೆಂದು ಪರಿಗಣಿಸಿ ಧನಾತ್ಮಕವಾಗಿ ಎದುರಿಸಬೇಕು. ಯಾವ ಕಾರಣಕ್ಕೂ, ಧಾರ್ಮಿಕ ನಿಯಮ, ದೇಶದ ಕಾನೂನು ಮುರಿಯುವ ಪ್ರಯತ್ನ ಮಾಡಬಾರದು. ಪ್ರೀತಿ, ವಿಶ್ವಾಸ, ಸೇವೆಯಿಂದ ಜನಮನ ಗೆಲ್ಲಬೇಕು. ಕೆಡುಕನ್ನು ಅಳಿಸುವ ಕಾರ್ಯದಲ್ಲಿ ಯಾವುದೇ ರೀತಿಯಲ್ಲಿ ರಾಜಿ ಮಾಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಖಾಝಿ ಕಿವಿಮಾತು ಹೇಳಿದರು.

ಮಂಗಳೂರು ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಂದೇಶ ನೀಡಿ ಅವರು ಮಾತನಾಡಿದರು. ಒಂದು ತಿಂಗಳ ಕಾಲ ಉಪವಾಸ ಆಚರಣೆ ಜತೆಗೆ ನಿರಂತರ ದೇವರ ಸ್ಮರಣೆ, ದಾನ ಧರ್ಮಾದಿಗಳನ್ನು ಮಾಡಿದ ಮುಸ್ಲಿಮರಿಗೆ ಮುಂದಿನ 11 ತಿಂಗಳು ಶಾಂತಿ, ಸಹನೆಯ ಉತ್ತಮ ಬದುಕು ನಡೆಸಲು ರಮ್ಝಾನ್ ಪ್ರೇರಣೆ ನೀಡಲಿ. ಪ್ರವಾದಿ ಮುಹಮ್ಮದ್ ಅವರ ಆದರ್ಶ ಬದುಕು ಎಲ್ಲರಿಗೂ ಮಾದರಿಯಾಗಲಿ ಎಂದವರು ಹೇಳಿದರು.

ನಗರಾಡಳಿತ ಮತ್ತು ವಸತಿ ಸಚಿವ ಯು.ಟಿ.ಖಾದರ್ ಮಾತನಾಡಿ, ಹಬ್ಬದ ಆಚರಣೆಯ ಮೂಲಕ ನಾವು ನಮ್ಮ ವ್ಯಕ್ತಿತ್ವವನ್ನು ಬದಲಾಯಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ಕರಾವಳಿಯಲ್ಲಿ ಆಚರಣೆ ಮಾಡುವ ಪ್ರತಿಯೊಂದು ಹಬ್ಬ ಕೂಡ ಏಕತೆ, ಭಾತೃತ್ವದಿಂದ ಬದುಕು ನಡೆಸಬೇಕು ಎನ್ನುವುದನ್ನು ಸಾರುತ್ತದೆ ಎಂದರು.

ಝೀನತ್ ಬಕ್ಷ್ ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ವೈ.ಅಬ್ದುಲ್ಲಾ ಕುಂಞಿ ಈದ್ ಸಂದೇಶ ನೀಡಿದರು. ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ನಮಾಝ್‌ಗೆ ಚಪ್ಪರ ಮೂಲಕ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರು ಸಂಚಾರ ನಿಯಂತ್ರಿಸಿ ವಿಶೇಷ ಬಂದೋಬಸ್ತ್ ಏರ್ಪಡಿಸಿದ್ದರು. ಸಂತ ಅಲೋಶಿಯಸ್ ಕಾಲೇಜಿನ ಮೈದಾನದಲ್ಲಿ ವಾಹನಗಳ ಪಾರ್ಕಿಂಗ್‌ಗೆ ಜಾಗ ಕೊಟ್ಟು ಸಹಕರಿಸಲಾಗಿತ್ತು.

ಕುದ್ರೊಳಿ ಜಾಮಿಯಾ ಮಸೀದಿಯಲ್ಲಿ ಧರ್ಮ ಗುರು ಮುಫ್ತಿ ಮನ್ನಾನ್ ಸಾಹೇಬ್ ಅವರ ನೇತೃತ್ವದಲ್ಲಿ ನಮಾಝ್, ಪ್ರವಚನ ನಡೆಯಿತು. ಇಲ್ಲಿಗೂ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಭೇಟಿ ನೀಡಿ ಸಮಸ್ತ ಮುಸ್ಲಿಮರಿಗೆ ಹಬ್ಬದ ಶುಭಾಶಯಗಳನ್ನು ಹೇಳಿದರು. ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್, ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಮಂಗಳೂರು ವಾಸ್‌ಲೇನ್‌ನ ಮಸ್ಜಿದುಲ್ ಇಹ್ಸಾನ್‌ನಲ್ಲಿ ಧರ್ಮ ಗುರುಗಳಾದ ಮುಹಮ್ಮದ್ ತಯ್ಯಿಬ್ ಉಸ್ತಾದ್ ನೇತೃತ್ವದಲ್ಲಿ ನಮಾಝ್ ಮತ್ತು ಪ್ರವಚನ ನಡೆಯಿತು. ಮಸೀದಿಯ ಇಮಾಮರುಗಳಾದ ಸಲ್ಮಾನ್, ಉಸ್ತಾದ್, ಅಲ್ತಾಫ್, ಉಸ್ತಾದ್‌ಸ ಸಹಿತ ಗಣ್ಯರು ಭಾಗವಹಿಸಿದ್ದರು.

ಹಂಪನಕಟ್ಟೆಯ ಮಸ್ಜಿದ್ ನೂರ್, ಪಂಪ್‌ವೆಲ್‌ನ ತಖ್ವಾ ಮಸ್ಜಿದ್, ನೆಲ್ಲಿಕಾಯಿ ರಸ್ತೆಯ ಇಬ್ರಾಹಿಂ ಖಲೀಲ್, ಬಂದರ್‌ನ ಕಚ್ಚಿ ಮೆಮೋನ್, ಕಂಕನಾಡಿ ಮತ್ತಿತರ ಮಸೀದಿಗಳಲ್ಲಿ ಈದ್ ನಮಾಝ್ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X