Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲಾಲಾಗೆ ಗುಂಡಿಕ್ಕಿದ್ದ ‘ರೇಡಿಯೊ...

ಮಲಾಲಾಗೆ ಗುಂಡಿಕ್ಕಿದ್ದ ‘ರೇಡಿಯೊ ಮುಲ್ಲಾ’ ಅಮೆರಿಕದ ಡ್ರೋನ್ ದಾಳಿಗೆ ಬಲಿ

ವಾರ್ತಾಭಾರತಿವಾರ್ತಾಭಾರತಿ15 Jun 2018 1:03 PM IST
share
ಮಲಾಲಾಗೆ ಗುಂಡಿಕ್ಕಿದ್ದ ‘ರೇಡಿಯೊ ಮುಲ್ಲಾ’ ಅಮೆರಿಕದ ಡ್ರೋನ್ ದಾಳಿಗೆ ಬಲಿ

ಹೊಸದಿಲ್ಲಿ,ಜೂ.15: ನೊಬೆಲ್ ಪ್ರಶಸ್ತಿ ಪುರಸ್ಕೃತ ಮಹಿಳಾ ಹಕ್ಕುಗಳ ಕಾರ್ಯಕರ್ತೆ ಮಲಾಲಾ ಯೂಸುಫ್‌ಝಾಯಿ ಅವರಿಗೆ ಗುಂಡಿಕ್ಕಿದ್ದ ವ್ಯಕ್ತಿ ಎನ್ನಲಾಗಿರುವ ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನದ ಮುಖ್ಯಸ್ಥ ಫಝ್ಲುಲ್ಲಾ(44) ಅಮೆರಿಕದ ಡ್ರೋನ್ ದಾಳಿಯಲ್ಲಿ ಕೊಲ್ಲಲ್ಪಟ್ಟಿರುವುದಾಗಿ ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಅಮೆರಿಕದ ಮಿಲಿಟರಿ ಅಧಿಕಾರಿಯೋರ್ವರು ವಾಯ್ಸಿ ಆಫ್ ಅಮೆರಿಕಾ(ವಿಒಐ)ಕ್ಕೆ ಇಂದು ಖಚಿತಪಡಿಸಿದ್ದಾರೆ. ಪಾಕಿಸ್ತಾನದ ಸ್ವಾತ್ ಕಣಿವೆಯಲ್ಲಿ ನಕಲಿ ರೇಡಿಯೋದಲ್ಲಿ ತನ್ನ ಸುದೀರ್ಘ ಮತ್ತು ತೀಕ್ಷ್ಣ ಭಾಷಣಗಳಿಂದಾಗಿ ಫಝ್ಲ್ಲುಲ್ಲಾ ‘ಮುಲ್ಲಾ ರೇಡಿಯೊ’ಎಂದೂ ಹೆಸರಾಗಿದ್ದ.

ಅಮೆರಿಕದ ಪಡೆಗಳು ಬುಧವಾರ ರಾತ್ರಿ ಪಾಕಿಸ್ತಾನ ಮತ್ತು ಅಫಘಾನಿಸ್ತಾನದ ಗಡಿಗೆ ಸಮೀಪದಲ್ಲಿರುವ ಕುನಾರ್ ಪ್ರಾಂತದಲ್ಲಿ ಹಿರಿಯ ತಾಲಿಬಾನ್ ನಾಯಕನನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸಿದ್ದವು ಎಂದು ಅಫಘಾನಿಸ್ತಾನದಲ್ಲಿರುವ ಅಮೆರಿಕ ಪಡೆಗಳ ವಕ್ತಾರ ಮಾರ್ಟಿನ್ ಒ’ಡೊನೆಲ್ ಅವರು ಗುರುವಾರ ವಿಒಎಕ್ಕೆ ತಿಳಿಸಿದ್ದರು. ಅವರು ಫಝ್ಲುಲ್ಲಾನ ಹೆಸರನ್ನು ನಿರ್ದಿಷ್ಟವಾಗಿ ಹೇಳಿರಲಿಲ್ಲ.

ಅಮೆರಿಕ ಫಜ್ಲುಲ್ಲಾನನ್ನು ಕೊಂದಿರುವುದಾಗಿ ವರದಿಯಾಗಿರುವುದು ಇದು ಮೊದಲ ಬಾರಿಯೇನಲ್ಲ. 2010ರಿಂದಲೂ ಈ ಭಯೋತ್ಪಾದಕ ಕೊಲ್ಲಲ್ಪಟ್ಟಿದ್ದಾನೆಂದು ಕನಿಷ್ಠ ನಾಲ್ಕು ಬಾರಿ ವರದಿಯಾಗಿತ್ತು.

 ಮುಲ್ಲಾ ರೇಡಿಯೋ ಅಥವಾ ರೇಡಿಯೊ ಮುಲ್ಲಾ ಅಥವಾ ಮೌಲಾನಾ ರೇಡಿಯೋ ಎಂದು ಕರೆಯಲಾಗುವ ಫಝ್ಲುಲ್ಲಾ 2012ರಲ್ಲಿ ಆಗ 15ರ ಹರೆಯದವರಾಗಿದ್ದ ಮಲಾಲಾರ ಕೊಲೆಗೆ ಆದೇಶಿಸಿದ್ದ ಎಂದು ಅಮೆರಿಕವು ಹೇಳಿದೆ. ಮಲಾಲಾರ ಶಾಲಾಬಸ್‌ನೊಳಗೆ ಪ್ರವೇಶಿಸಿದ್ದ ಫಜ್ಲುಲ್ಲಾ ಅವರ ತಲೆಗೆ ಗುಂಡಿಕ್ಕಿದ್ದ. ತೀವ್ರವಾಗಿ ಗಾಯಗೊಂಡಿದ್ದ ಅವರು ಪವಾಡಸದೃಶವಾಗಿ ಬದುಕುಳಿದಿದ್ದರು.

2014ರಲ್ಲಿ ಪೇಷಾವರದಲ್ಲಿನ ಆರ್ಮಿ ಪಬ್ಲಿಕ್ ಸ್ಕೂಲ್ ಮೇಲೆ ನಡೆದಿದ್ದ ದಾಳಿಗೂ ಫಝ್ಲುಲ್ಲಾ ಆದೇಶಿಸಿದ್ದ ಎನ್ನಲಾಗಿದೆ. ಆ ದಾಳಿಯಲ್ಲಿ 130 ಮಕ್ಕಳು ಸೇರಿದಂತೆ 151 ಜನರು ಕೊಲ್ಲಲ್ಪಟ್ಟಿದ್ದರು. 2013ರಲ್ಲಿ ಆತ ಪಾಕಿಸ್ತಾನ ತಾಲಿಬಾನ್‌ನ ಮುಖ್ಯಸ್ಥನಾಗಿ ನೇಮಕಗೊಂಡಿದ್ದ.

ಅಮೆರಿಕವು ಕಳೆದ ಮಾರ್ಚ್‌ನಲ್ಲಿ ಫಝ್ಲುಲ್ಲಾನ ತಲೆಯ ಮೇಲೆ ಐದು ಮಿಲಿಯನ್ ಡಾ. ಬಹುಮಾನವನ್ನು ಘೋಷಿಸಿತ್ತು. ಅದೇ ತಿಂಗಳು ಅಮೆರಿಕದ ಡ್ರೋನ್ ದಾಳಿಯಲ್ಲಿ ಫಜ್ಲುಲ್ಲಾನ ಪುತ್ರ ಅಬ್ದುಲ್ಲಾ ಕೊಲ್ಲಲ್ಪಟ್ಟಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X