Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸನ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ...

ಹಾಸನ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಖಚಿತ: ಸಚಿವ ರೇವಣ್ಣ ಭರವಸೆ

ಜಿಲ್ಲೆಗೆ ಹೊಸ ತೋಟಗಾರಿಕಾ ಕಾಲೇಜು

ವಾರ್ತಾಭಾರತಿವಾರ್ತಾಭಾರತಿ15 Jun 2018 10:57 PM IST
share
ಹಾಸನ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಖಚಿತ: ಸಚಿವ ರೇವಣ್ಣ ಭರವಸೆ

ಹಾಸನ, ಜೂ. 15: ಜಿಲ್ಲೆಯಲ್ಲಿ ಹೊಸದಾಗಿ ತೋಟಗಾರಿಕೆ ಕಾಲೇಜು ಹಾಗೂ ಸೋಮನಹಳ್ಳಿ ಕಾವಲ್‌ನ ಆಲೂಗೆಡ್ಡೆ ಸಂಶೋಧನಾ ಕೇಂದ್ರದಲ್ಲಿ ಚಿಪ್ಸ್ ತಯಾರಿಕಾ ಘಟಕ ಪ್ರಾರಂಭಿಸಲು ನಿರ್ಧರಿಸಿದ್ದು, ಶೀಘ್ರದಲ್ಲಿ ತೋಟಗಾರಿಕಾ ಸಚಿವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಮತ್ತು ನಗರದ ಹೊರ ವಲಯದಲ್ಲಿ ಈಗಾಗಲೆ ಕಾಯ್ದಿರಿಸಿರುವ ಸುಮಾರು 500 ಕ್ಕೂ ಅಧಿಕ ಎಕರೆ ಜಮೀನಿನಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪ್ರಾರಂಭವಾಗುವ ನಿರೀಕ್ಷೆ ಇದೆ ಎಂದು ಲೋಕೋಪಯೋಗಿ ಸಚಿವರಾದ ಎಚ್ ಡಿ ರೇವಣ್ಣ ಭರವಸೆ ನೀಡಿದರು.

ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿದ ಅವರು ತಮ್ಮ ಹೊಸ ಉದ್ದೇಶಿತ ಅಭಿವೃದ್ದಿ ಯೋಜನೆಗಳ ಬಗ್ಗೆ ಸಭೆಯ ಮುಂದಿಟ್ಟರು.

ಜಿಲ್ಲೆಯ ಸಮಗ್ರ ಅಭಿವೃದ್ದಿ ತಮ್ಮ ಆದ್ಯತೆಯಾಗಿದ್ದು, ಎಲ್ಲಾ ಅಧಿಕಾರಿಗಳು ಇದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸಬೇಕೆಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿರುವ ಆಲೂಗೆಡ್ಡೆ ಬೆಳೆ ಹಾನಿ ಬಗ್ಗೆ ಕೂಡಲೆ ಪ್ರಸ್ತಾವನೆ ಸಲ್ಲಿಸಿ, ಕೃಷಿಕರಿಗೆ ಪರಿಹಾರ ಒದಗಿಸಿ ಎಂದ ಸಚಿವರು ತೋಟಗಾರಿಕೆ ಸಸಿಗಳ ಅಭಿವೃದ್ಧಿ ಹಾಗೂ ಮಿಶ್ರ ಬೇಸಾಯಕ್ಕೆ ಆದ್ಯತೆ ನೀಡಿ ಅದರ ಅನುದಾನಕ್ಕೆ ರೈತರಿಗೆ ಸೂಕ್ತ ಮಾಹಿತಿ, ಸೌಲಭ್ಯಗಳನ್ನು ನೀಡಿ ಅವರ ಆರ್ಥಿಕ ಮಟ್ಟ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸಿ ಎಂದು ಸಚಿವ ರೇವಣ್ಣ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ರಾಷ್ಟ್ರೀಯ ತೋಟಗಾರಿಕಾ ಮಿಷನ್ ಹಾಗೂ ಇಲಾಖಾ ಕಾರ್ಯಕ್ರಮಗಳನ್ನು ಒಟ್ಟುಗೂಡಿಸಿ ಲಾಭದಾಯಕ ತೋಟಗಾರಿಕಾ ಸಸಿಗಳನ್ನು ಬೆಳೆದು ರೈತರಿಗೆ ವಿತರಿಸಿ, ಜೊತೆಗೆ ಸಾಮಾಜಿಕ ಅರಣ್ಯ ಇಲಾಖೆಯು ಇದಕ್ಕೆ ಪೂರಕ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಬೇಕು ಎಂದು ಸಚಿವರು ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಇದೇ ವೇಳೆ ಸಭೆಯಲ್ಲಿ ಹಾಜರಿದ್ದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ಎಚ್.ಕೆ ಕುಮಾರಸ್ವಾಮಿ, ಸಿ.ಎನ್.ಬಾಲಕೃಷ್ಣ. ಕೆ.ಎಸ್.ಲಿಂಗೇಶ್ ಅವರು ಬೆಳೆ ವಿಮೆ ಪರಿಹಾರ ವಿತರಣೆಯಲ್ಲಾಗುತ್ತಿರುವ ವಿಳಂಬದ ಬಗ್ಗೆ ಪ್ರಸ್ತಾಪಿಸಿ ರೈತರಿಗೆ ತೊಂದರೆಯಾಗುತ್ತಿದೆ ವಿಮೆ ಹಣ ಕಟ್ಟಿಸಿಕೊಳ್ಳುವಾಗಲೆ ಎಲ್ಲಾ ಅಗತ್ಯ ದಾಖಲೆಗಳನ್ನು ಪಡೆಯಬೇಕಿತ್ತು. ಈಗ ಸರಿಯಾದ ವಿವರಗಳು ಲಭ್ಯವಿಲ್ಲ ಎಂಬ ಕಾರಣಗಳನ್ನು ನೀಡಲಾಗುತ್ತಿದೆ ಇದನ್ನು ತಕ್ಷಣ ಬಿಡುಗಡೆಗೊಳಿಸಿ ಎಂದು ಒತ್ತಾಯಿಸಿದರು.

ಜಂಟಿ ಕೃಷಿ ನಿರ್ದೇಶಕರಾದ ಮಧುಸೂಧನ್ ಸಭೆಗೆ ಮಾಹಿತಿ ನೀಡಿ 2016 ನೇ ಸಾಲಿನಲ್ಲಿ ಬೆಳೆ ವಿಮೆ ಪರಿಹಾರ ಬಂದಿದ್ದು ಅದರಲ್ಲಿ 8000 ರೈತರ ಬ್ಯಾಂಕ್ ಖಾತೆ ಬಗ್ಗೆ ಕೆಲವು ಪೂರಕ ವಿವರಗಳು ಬೇಕಾಗಿವೆ ವಿಮಾ ಸಂಸ್ಥೆ ಅವುಗಳನ್ನು ಸಂಗ್ರಹಿಸುತ್ತಿದೆ. 2017 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟಕ್ಕೆ ಸಂಬಂದಿಸಿದಂತೆ 1667 ಲಕ್ಷ ರೂ. ಬೆಳೆ ಪರಿಹಾರ ಹಣ ಬಂದಿದ್ದು ಇದರಲ್ಲಿ 825 ಲಕ್ಷ ರೂಪಾಯಿ ವಿತರಿಸಲಾಗಿದೆ ಉಳಿದದ್ದನ್ನು ಇನ್ನೊಂದು ವಾರದಲ್ಲಿ ವಿಲೇವಾರಿ ಮಾಡಲಾಗುವುದು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರೇವಣ್ಣ ಅವರು ಕೂಡಲೆ ಎಲ್ಲಾ ಬೆಳೆ ಪರಿಹಾರ ಮೊತ್ತವನ್ನು ರೈತರಿಗೆ ತಲುಪಿಸುವ ಕೆಲಸ ಮಾಡಿ ಎಂದು ಸೂಚಿಸಿದರು. ರೈತರಿಗೆ ಸರಿಯಾಗಿ ಸಕಾಲದಲ್ಲಿ ಸಾಲ ವಿತರಿಸದೆ ಇರುವ ಹಾಗೂ ಬೆಳೆ ಪರಿಹಾರ ಹಣವನ್ನು ಸಾಲದ ಮೊತ್ತಕ್ಕೆ ಕಡಿತ ಮಾಡಿಕೊಳ್ಳುವ ಬ್ಯಾಂಕ್‌ಗಳ ವ್ಯವಸ್ಥಾಪಕರ ವಿರುದ್ದ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ರೇಷ್ಮೆ ಬಿತ್ತನೆ ವಿಸ್ತರಣೆಯಾಗಬೇಕು, ಮೀನುಗಾರಿಕೆ ಉತ್ಪಾದನೆ ಹೆಚ್ಚಳವಾಗಬೇಕು ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಅವರು ಹೇಳಿದರು. ಜಿಲ್ಲೆಯಲ್ಲಿ ಪಶುಭಾಗ್ಯ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಸಮರ್ಪಕವಾಗಿಲ್ಲ ಲಾಟರಿ ಮೂಲಕ ಅರ್ಹ ಬಡವರಿಗೆ ಸೌಲಭ್ಯ ಒದಗಿಸಿ ಎಂದು ಸಚಿವರು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಕಲೇಶಪುರ ಹಾಗೂ ಆಲೂರು ತಾಲೂಕಿನಲ್ಲಿ ಆನೆ ಕಾರಿಡಾರ್ ನಿರ್ಮಾಣ ಕುರಿತಂತೆ ಶಾಸಕರಾದ ಎಚ್.ಕೆ ಕುಮಾರಸ್ವಾಮಿಯವರು ಪ್ರಸ್ತಾಪಿಸಿದರು. ಈ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಅನುಷ್ಠಾನಕ್ಕೆ ಮನವಿ ಸಲ್ಲಿಸಿ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು ಎಂದರು.

ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ಅವರು ಅರಣ್ಯ ಜಮೀನಿನಲ್ಲಿ ಹಿಂದಿನಿಂದ ಮನೆ ಕಟ್ಟಿಕೊಂಡಿರುವ ಬಡವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕು ಪತ್ರ ನೀಡಬೇಕು. ಅದರ ಬದಲು ಅವರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ ಇದನ್ನು ನಿಲ್ಲಿಸಬೇಕು ಎಂದು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರೇವಣ್ಣ ಅವರು ಅರಣ್ಯ ಇಲಾಖೆ ಅಧಿಕಾರಿಗಳು ಒಂದೊಂದು ದಿನ ಒಂದು ತಾಲೂಕಿಗೆ ಭೇಟಿ ನೀಡಿ ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ರೈತರಿಗೆ ಇರುವ ಸಮಸ್ಯೆಗಳನ್ನು ಪರಿಹರಿಸಿಕೊಡುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಬಾಕಿ ಇರುವ ಸರ್ವೇ ಕಾರ್ಯವನ್ನು ಆದಷ್ಟು ಬೇಗ ಮುಗಿಸಬೇಕು ಸುಮ್ಮನೆ ಸಬೂಬು ಹೇಳುತ್ತಾ ರೈತರಿಗೆ ಸಂಕಷ್ಟ ನೀಡಬೇಡಿ ಕಂದಾಯ ಇಲಾಖೆ ಜೊತೆಗೆ ಸಮನ್ವಯ ಸಾಧಿಸಿ ಸಮಸ್ಯೆ ಬಗೆಹರಿಸಿ ಎಂದು ಸಚಿವ ರೇವಣ್ಣ ಜಿಲ್ಲಾ ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಖಚಿತ

ಮಾಜಿ ಪ್ರಧಾನಿ ದೇವೇಗೌಡ ಅವರ ಪ್ರಯತ್ನದ ಫಲವಾಗಿ ವಿಮಾನ ನಿಲ್ದಾಣ ಸ್ಥಾಪನೆ ಸನಿಹವಾಗಿದೆ. ಕೇಂದ್ರ ನಾಗರೀಕ ವಿಮಾನಯಾನ ಸಚಿವರು ಈ ಬಗ್ಗೆ ಪತ್ರ ಬರೆದಿದ್ದು ಹಾಲಿ ಲಭ್ಯವಿರುವ ಜಮೀನಿನ ಜೊತೆಗೆ ಇನ್ನೂ 200 ಎಕರೆ ಹೆಚ್ಚುವರಿ ಭೂಮಿ ಒದಗಿಸಿದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಪರಿಶೀಲಿಸುತ್ತಿದ್ದು ಲಭ್ಯತೆಯನುಸಾರ ಭೂಮಿಯನ್ನು ಒದಗಿಸಲಾಗುವುದು ಎಂದು ತಿಳಿಸಿದರು. ಇಷ್ಟು ವರ್ಷ ಬರಗಾಲದಿಂದ ನಷ್ಟ ಅನುಭವಿಸುತ್ತಿದ್ದ ಜಿಲ್ಲೆಯ ಆಲೂಗೆಡ್ಡೆ ಬೆಳೆಗಾರರು ಈ ವರ್ಷ ಸುರಿದ ಬಾರಿ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾನಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯ ಮಂತ್ರಿಯವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಈ ವರ್ಷ ಮುಂಗಾರು ಜಿಲ್ಲೆಯಲ್ಲಿ ಸಾಕಷ್ಟು ನಷ್ಟ ಉಂಟು ಮಾಡಿದೆ 8000 ಎಕ್ಟೇರ್ ಪ್ರದೇಶದಲ್ಲಿ ಆಲೂಗೆಡ್ಡೆ ಬೆಳೆ ಹಾನಿಯಾಗಿದೆ ಅಲ್ಲದೆ ಹೊಗೆಸೊಪ್ಪು, ಹಲಸಂದೆ, ತಡ್ನಿ ಸೇರಿದಂತೆ ತರಕಾರಿ ಬೆಳೆದ ಭೂ ಪ್ರದೇಶವು ನಷ್ಟ ಸಂಭವಿಸಿದೆ ಇದರ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೃಷಿ ಮತ್ತು ತೋಟಗಾರಿಕಾ ಇಲಾಖಾ ಆಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ಮಳೆಯಿಂದ ಉಂಟಾಗಿರುವ ಹಾನಿಗಳಿಗೆ ಪರಿಹಾರ ನೀಡುವಂತೆ ಕಂದಾಯ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಯಾವುದೇ ಆದೇಶಗಳಿಗೆ ಕಾಯದೆ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳಲು ಎಲ್ಲಾ ಇಂಜಿನಿಯರ್‌ಗಳಿಗೆ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಮುಂದಿನ 4 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಂಡು ಅಲ್ಲಿ ಆಗಬೇಕಿರುವ ಲೋಕೋಪಯೋಗಿ ಇಲಾಖಾ ಅಭಿವೃದ್ದಿ ಕಾರ್ಯಗಳ ಬಗ್ಗೆ ಪರಿಶಿಲಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಇದ್ದು ಅನೇಕ ನುರಿತ ತಜ್ಞ ವೈದ್ಯರಿದ್ದಾರೆ. ಹಾಗಿದ್ದೂ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಂದ ತುರ್ತು ಅಗತ್ಯ ಪ್ರಕರಣಗಳನ್ನು ಹೊರತುಪಡಿಸಿ ಯಾವುದೇ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸುವಂತಿಲ್ಲ ಈ ಬಗ್ಗೆ ಈಗಾಗಲೆ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು ಲೋಪಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಯಾವುದೇ ಹಸ್ತಕ್ಷೇಪವಿಲ್ಲ: ತಾವು ಯಾವುದೇ ಇತರ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ ಅಂತಹ ಅಗತ್ಯ ತಮಗಿಲ್ಲ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲೆಯೊಳಗಿನ ಅಭಿವೃದ್ದಿ ಕಾರ್ಯಗಳ ಬಗ್ಗೆ ಮಾತ್ರ ತಾವು ಗಮನ ಹರಿಸುತ್ತಿರುವುದಾಗಿ ಸಚಿವರು ಸ್ಪಪ್ಟಡಿಸಿದರು. ತಮ್ಮ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ನಡುವಿನ ಬಾಂಧವ್ಯ ಉತ್ತಮವಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಪ್ರೀತಂ ಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಶ್ವೇತಾ ದೇವರಾಜ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿಗಳಾದ ಬಿ.ಆರ್. ಪೂರ್ಣಿಮಾ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X