ಸಿದ್ದರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲಿಸಲು ಕೋರ್ಟ್ ಸೂಚನೆ

ಮೈಸೂರು,ಜೂ.18: ಭೂ ಅಕ್ರಮ ವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲಿಸಲು ಮೈಸೂರಿನ 2ನೇ ಪ್ರಧಾನ ಸತ್ರ ನ್ಯಾಯಾಲಯ ಆದೇಶ ನೀಡಿದೆ.
ಸಿದ್ದರಾಮಯ್ಯ ಅವರು 25 ವರ್ಷಗಳ ಹಿಂದೆ ಮೈಸೂರಿನ ವಿಜಯನಗರ 2ನೇ ಹಂತದಲ್ಲಿ ಖರೀದಿಸಿದ್ದ ನಿವೇಶನ ಸಂಬಂಧ ಈಗ ಕಾನೂನು ಸಂಕಟ ಎದುರಾಗಿದ್ದು, ಸೆಕ್ಷನ್ 120ಬಿ, 197, 166, 167, 169, 200, 417, 409, 420 ಹಾಗೂ ಐಪಿಸಿ ಸೆಕ್ಷನ್ 468 ಅಡಿ ಪ್ರಕರಣ ದಾಖಲಾಗಿದೆ.
ಗಂಗರಾಜು ಹಾಗೂ ಸಂಗಮೇಶ್ ಎಂಬ ವಕೀಲರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗಲೇ ಈ ಪ್ರಕರಣ ಕೈಗೆತ್ತಿಕೊಂಡು ಕಾನೂನು ಹೋರಾಟ ಆರಂಭಿಸಿದ್ದರು. ರಾಜ್ಯಪಾಲರಿಗೂ ದೂರು ನೀಡಿದ್ದರು. ಇದಕ್ಕೆ ತಮ್ಮ ಅನುಮತಿ ಅಗತ್ಯವಿಲ್ಲವೆಂದು ರಾಜ್ಯಪಾಲರು ಸ್ಪಷ್ಟಪಡಿಸಿದ ಬಳಿಕ ಮೈಸೂರಿನ ಕೋರ್ಟ್ ಮೊರೆ ಹೋಗಿದ್ದರು. ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ 9 ಕ್ರಿಮಿನಲ್ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರ್ಟ್ ಆದೇಶಿಸಿದ್ದು, ಇಂದೇ ಮೈಸೂರಿನ ಜಯಲಕ್ಷ್ಮಿ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.





