Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು ರೈಲು ಮಾರ್ಗ ವಿಚಾರದಲ್ಲಿ ರಾಜ್ಯ...

ಕೊಡಗು ರೈಲು ಮಾರ್ಗ ವಿಚಾರದಲ್ಲಿ ರಾಜ್ಯ ಸರಕಾರದ ಪಾತ್ರವಿಲ್ಲ: ಸಚಿವ ದೇಶಪಾಂಡೆ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ18 Jun 2018 8:32 PM IST
share
ಕೊಡಗು ರೈಲು ಮಾರ್ಗ ವಿಚಾರದಲ್ಲಿ ರಾಜ್ಯ ಸರಕಾರದ ಪಾತ್ರವಿಲ್ಲ: ಸಚಿವ ದೇಶಪಾಂಡೆ ಸ್ಪಷ್ಟನೆ

ಮಡಿಕೇರಿ, ಜೂ.18: ಮೈಸೂರಿನಿಂದ ಕೊಡಗಿನ ಮೂಲಕ ತಲಚೇರಿಗೆ ರೈಲು ಮಾರ್ಗ ನಿರ್ಮಿಸುವುದರಲ್ಲಿ ರಾಜ್ಯ ಸರಕಾರದ ಪಾತ್ರವೇನೂ ಇಲ್ಲ ಎಂದು ಸ್ಪಷ್ಟಪಡಿಸಿರುವ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು, ಜನರ ಭಾವನೆಗಳಿಗೆ ವಿರುದ್ಧವಾಗಿ ಸರಕಾರ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಳೆಹಾನಿ ಕುರಿತ ಪರಿಶೀಲನಾ ಸಭೆಯಲ್ಲಿ ಶಾಸಕ ಕೆ.ಜಿ.ಬೋಪಯ್ಯ ಅವರು ಗಮನಸೆಳೆದ ಸಂದರ್ಭ ಮಾತನಾಡಿದ ಸಚಿವರು, ಮೈಸೂರು-ತಲಚೇರಿ ರೈಲ್ವೆ ಮಾರ್ಗ ನಿರ್ಮಾಣದಲ್ಲಿ ರಾಜ್ಯ ಸರಕಾರಕ್ಕೆ ಆಸಕ್ತಿ ಇಲ್ಲ. ಕೇರಳ ಸರಕಾರದ ಒತ್ತಡದ ಮೇರೆಗೆ ಕೇಂದ್ರ ಸರಕಾರ ಯೋಜನೆಗೆ ಅನುಮೋದನೆ ನೀಡಿದರೂ, ಕರ್ನಾಟಕ ಹಾಗೂ ಕೊಡಗಿಗೆ ಇದರಿಂದ ಪ್ರಯೋಜನವಾಗುವುದಿದ್ದಲ್ಲಿ ಮಾತ್ರ ರಾಜ್ಯ ಸರಕಾರ ಗಮನಹರಿಸಲಿದೆ. ಆದರೆ ಈ ರೈಲ್ವೆ ಮಾರ್ಗದಿಂದ ರಾಜ್ಯಕ್ಕಾಗಲಿ, ಕೊಡಗಿಗಾಗಲಿ ಯಾವುದೇ ಪ್ರಯೋಜನವಾಗುವುದಿಲ್ಲ ಎಂಬುದು ಈಗಾಗಲೇ ಮನವರಿಕೆಯಾಗಿದೆ ಎಂದು ಹೇಳಿದರು.

ಕೇರಳ ಸರಕಾರದ ನಿರ್ದೇಶನದಂತೆ ಅಲ್ಲಿನ ಅಧಿಕಾರಿಗಳು ಕೊಡಗಿನಲ್ಲಿ ಸರ್ವೆ ಕಾರ್ಯ ನಡೆಸುತ್ತಿದ್ದಾರೆ. ಆದರೆ ಈ ವಿಷಯ ಜಿಲ್ಲಾಡಳಿತದ ಗಮನಕ್ಕೂ ಬಂದಿಲ್ಲ. ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ ಬಳಿಕವಷ್ಟೇ ವಿಷಯ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕೇರಳ ಸರಕಾರಕ್ಕೆ ಪತ್ರ ಬರೆದು ವಿವರಣೆ ಕೋರುವಂತೆ ಜಿಲ್ಲಾ ದಂಡಾಧಿಕಾರಿಯವರಿಗೆ ಸೂಚಿಸಲಾಗಿದೆ. ಯಾವುದೇ ಸರಕಾರವಾದರೂ, ಕೊಡಗಿನಲ್ಲಿ ಸರ್ವೆ ಕಾರ್ಯ ನಡೆಸಬೇಕಾದರೆ ಅದರ ಉದ್ದೇಶಗಳ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತರಲೇಬೇಕು. ನಿಯಮ ಮೀರಿ ಸರ್ವೆ ಕಾರ್ಯ ನಡೆದಿದ್ದರೆ ಅದರ ಬಗ್ಗೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರವಿದೆ ಎಂದು ಹೇಳಿದರಲ್ಲದೆ, ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಸರಕಾರದ ಮಟ್ಟದಲ್ಲೂ ಈ ಬಗ್ಗೆ ಪತ್ರವ್ಯವಹಾರ ನಡೆಸಲಾಗುವುದು ಎಂದು ಸಚಿವ ದೇಶಪಾಂಡೆ ಸ್ಪಷ್ಟಪಡಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X