Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಾದಲ್ಲಿ ವಸಾಹತುಶಾಹಿ ಆಡಳಿತದ ವಿರುದ್ಧ...

ಗೋವಾದಲ್ಲಿ ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಟ ಇನ್ನೂ ಮುಗಿದಿಲ್ಲ:ಪಾರಿಕ್ಕರ್

ವಾರ್ತಾಭಾರತಿವಾರ್ತಾಭಾರತಿ18 Jun 2018 8:38 PM IST
share
ಗೋವಾದಲ್ಲಿ ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಟ ಇನ್ನೂ ಮುಗಿದಿಲ್ಲ:ಪಾರಿಕ್ಕರ್

ಪಣಜಿ,ಜೂ.18: ಅನಾರೋಗ್ಯಕ್ಕೀಡಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಮರಳಿದ ಬಳಿಕ ಸೋಮವಾರ ತನ್ನ ಮೊದಲ ಬಹಿರಂಗ ಭಾಷಣವನ್ನು ಮಾಡಿದ ಗೋವಾ ಮುಖ್ಯಮಂತ್ರಿ ಮನೋಹರ ಪಾರಿಕ್ಕರ್ ಅವರು,ರಾಜ್ಯದಲ್ಲಿ ವಸಾಹತುಶಾಹಿ ಅಧಿಕಾರದ ವಿರುದ್ಧದ ಹೋರಾಟವಿನ್ನೂ ಮುಗಿದಿಲ್ಲ ಎಂದು ಹೇಳಿದರು. ಇದೇ ವೇಳೆ, ಈ ವರ್ಷ ರಾಜ್ಯವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡುವ ಸರಕಾರದ ನಿರ್ಣಯವನ್ನು ಅವರು ಪುನರುಚ್ಚರಿಸಿದರು.

ಗೋವಾ ಕ್ರಾಂತಿ ದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು,72 ವರ್ಷಗಳ ಹಿಂದೆ 1946ರಲ್ಲಿ ಆರಂಭಗೊಂಡಿದ್ದ ಹೋರಾಟವು 1961ರಲ್ಲಿ ಗೋವಾವನ್ನು ಪೋರ್ಚುಗೀಸರ ಆಡಳಿತದಿಂದ ವಿಮೋಚನೆಗೊಳಿಸಿದೆ. ಆದರೆ ಹೋರಾಟವಿನ್ನೂ ಮುಗಿದಿಲ್ಲ ಎಂದು ತಾನು ಭಾವಿಸಿದ್ದೇನೆ ಎಂದು ರಾಜ್ಯದ ಮಾಯೆಂ ಗ್ರಾಮದಲ್ಲಿ ನಿರ್ವಾಸಿತ ಆಸ್ತಿಗಳಲ್ಲಿ ವಾಸವಿರುವ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿ ಹೇಳಿದರು.

ಮಾಯೆಂ ನಿರ್ವಾಸಿತ ಆಸ್ತಿಗಳ ಸಮಸ್ಯೆಯು ಈ ಹೋರಾಟದ ಭಾಗವಾಗಿದೆ ಮತ್ತು ಆದಷ್ಟು ಶೀಘ್ರ ಅದನ್ನು ಬಗೆಹರಿಸಲು ತಾನು ಖುದ್ದಾಗಿ ಶ್ರಮಿಸುತ್ತಿದ್ದೇನೆ ಎಂದರು.

ಪಣಜಿಯಿಂದ 20 ಕಿ.ಮೀ. ದೂರದಲ್ಲಿರುವ,ಸುಮಾರು 30,000 ಜನಸಂಖ್ಯೆಯುಳ್ಳ ಮಾಯೆಂ ಗ್ರಾಮವನ್ನು ನಿರ್ವಾಸಿತ ಆಸ್ತಿ ಎಂದು ಘೋಷಿಸಲಾಗಿದೆ. ಈ ಆಸ್ತಿಗಳ ಒಡೆತನ ಹೊಂದಿದ್ದ ಪೋರ್ಚುಗೀಸ್ ಪ್ರಜೆಗಳು 1961ರಲ್ಲಿ ಗೋವಾ ವಿಮೋಚನೆಯ ಬಳಿಕ ಅವುಗಳನ್ನು ತೊರೆದು ಪೋರ್ಚುಗಲ್‌ಗೆ ಮರಳಿದ್ದರು. ಈ ಆಸ್ತಿಯಲ್ಲಿ ಒಕ್ಕಲುಗಳಾಗಿ ವಾಸವಾಗಿರುವ ಗೋವಾ ಪ್ರಜೆಗಳು ದಶಕಗಳಿಂದಲೂ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ.

ಮಾಯೆಂ ಗ್ರಾಮದಲ್ಲಿಯ ಭೂಮಿಯನ್ನು ಪೋರ್ಚುಗೀಸರ ಒಡೆತನದಿಂದ ಮುಕ್ತಗೊಳಿಸುವ ಅಗತ್ಯವಿದೆ ಎಂದು ಸ್ವಾತಂತ್ರ ಹೋರಾಟಗಾರ ಚಂದ್ರಕಾಂತ ಪೆಡ್ನೇಕರ್ ಅವರು ಕರೆ ನೀಡಿದರು.

 ತನ್ನ ಅನಾರೋಗ್ಯ ಮತ್ತು ರಾಜ್ಯದಲ್ಲಿ ಮೂರು ತಿಂಗಳುಗಳ ಕಾಲ ತನ್ನ ಅನುಪಸ್ಥಿತಿಯು 2018ರಲ್ಲಿ ಗೋವಾವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಸರಕಾರದ ನಿರ್ಣಯವನ್ನು ವಿಳಂಬಿಸಿದೆ ಎಂದು ಹೇಳಿದ ಪಾರಿಕ್ಕರ್,ಈ ವರ್ಷ ರಾಜ್ಯವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ಎಲ್ಲರೂ ಒಂದಾಗಿ ಶ್ರಮಿಸೋಣ ಎಂದರು.

ಪ್ರತಿ ವರ್ಷ ಜೂನ್ 18ನ್ನು ಗೋವಾ ಕ್ರಾಂತಿ ದಿನವನ್ನಾಗಿ ಆಚರಿಸಲಾಗುತ್ತಿದ್ದು, 1946ರಲ್ಲಿ ಇದೇ ದಿನ ಸ್ವಾತಂತ್ರ ಹೋರಾಟಗಾರ ರಾಮ ಮನೋಹರ ಲೋಹಿಯಾ ಅವರು ಪೋರ್ಚುಗೀಸರ ಆಡಳಿತದ ವಿರುದ್ಧ ಹೋರಾಟಕ್ಕೆ ಜನತೆಗೆ ಕರೆ ನೀಡಿದ್ದರು. ಈ ಚಳವಳಿ ಅಂತಿಮವಾಗಿ 1961,ಡಿ.19ರಂದು ಗೋವಾ ವಿಮೋಚನೆಗೆ ಕಾರಣವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X