ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಗುಂಡಿನ ದಾಳಿ
ಮಡಿಕೇರಿ ಜೂ.19 : ಕ್ಷುಲ್ಲಕ ವಿಚಾರಕ್ಕೆ ಕಲಹ ನಡೆದು ವ್ಯಕ್ತಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಮಡಿಕೇರಿ ಸಮೀಪ ಅಯ್ಯಂಗೇರಿ ಗ್ರಾಮದಲ್ಲಿ ನಡೆದಿದೆ.
ಮಾದಪ್ಪ ಎಂಬುವವರ ಮೇಲೆ ನಾಗೇಶ್(45) ಎಂಬಾತ ಗುಂಡು ಹಾರಿಸಿದ್ದು, ದಾಳಿಯಿಂದ ತಪ್ಪಿಸಿಕೊಂಡ ಮಾದಪ್ಪ ಅಪಾಯದಿಂದ ಪಾರಾಗಿದ್ದಾರೆ. ಗುಂಡು ಮರಕ್ಕೆ ತಗುಲಿದ್ದು, ಅದೃಷ್ಟವಶಾತ್ ಅನಾಹುತ ತಪ್ಪಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ನಾಗೇಶ್‍ನನ್ನು ಪೊಲೀಸರು ಬಂಧಿಸಿದ್ದಾರೆ.
ಎರಡು ಸುತ್ತು ಗುಂಡು ಹಾರಿಸಿದ್ದ ನಾಡ ಬಂದೂಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





