Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಕಾಲೇಜು ವಿದ್ಯಾರ್ಥಿನಿ...

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ ಪ್ರಕರಣ

ಅಪರಾಧಿಗೆ 7 ವರ್ಷ ಕಠಿಣ ಸಜೆ

ವಾರ್ತಾಭಾರತಿವಾರ್ತಾಭಾರತಿ20 Jun 2018 7:14 PM IST
share
ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ ಪ್ರಕರಣ

ಮಂಗಳೂರು, ಜೂ. 20: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ವಾಟ್ಸಪ್ ಮೂಲಕ ಪರಿಚಯಿಸಿಕೊಂಡು ಬಳಿಕ ಅಪಹರಿಸಿ ಅತ್ಯಾಚಾರಗೈದ ಪ್ರಕರಣ ಮಂಗಳೂರಿನ 6ನೆ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 7 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಧೀಶರು ಬುಧವಾರ ತೀರ್ಪು ನೀಡಿದ್ದಾರೆ.

ಬಂಟ್ವಾಳ ತಾಲೂಕು ಕೂಮಿನಡ್ಕ ನಿವಾಸಿ ವಿವಾಹಿತ ಇರ್ಷಾದ್ (27) ಅಪರಾಧಿ.

ಅತ್ಯಾಚಾರದ ಆರೋಪ ಮಂಗಳವಾರ ಸಾಬೀತಾಗಿದ್ದರೂ ನ್ಯಾಯಾಧೀಶರು ತೀರ್ಪನ್ನು ಬುಧವಾರಕ್ಕೆ ಕಾಯ್ದಿರಿಸಿದ್ದರು. ಇರ್ಷಾದ್ ಮೇಲೆ ಅಪಹರಣ (ಐಪಿಸಿ 366)ಕ್ಕೆ 3 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ 2 ತಿಂಗಳು ಹೆಚ್ಚುವರಿ ಶಿಕ್ಷೆ ಅನುಭವಿಸುವಂತೆ ನ್ಯಾಯಾಲಯ ತಿಳಿಸಿದೆ. ಐಪಿಸಿ 376 ಅತ್ಯಾಚಾರ ಪ್ರಕರಣದಲ್ಲಿ 7 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 3 ತಿಂಗಳ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕು. ಅಲ್ಲದೆ, ಅಕ್ರಮ ಬಂಧನ (342) ಪ್ರಕರಣದಲ್ಲಿ 3 ತಿಂಗಳು ಮತ್ತು ಬೆದರಿಕೆ (506) ಪ್ರಕರಣದಲ್ಲಿ 4 ತಿಂಗಳು ಶಿಕ್ಷೆ ಅನುಭವಿಸುವಂತೆ ನಾಯಾಧೀಶರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. 

ಘಟನೆಯ ಹಿನ್ನೆಲೆ

ನಗರದ ಕಾಲೇಜುವೊಂದರಲ್ಲಿ ಓದುತ್ತಿದ್ದ 18 ವರ್ಷದ ವಿದ್ಯಾರ್ಥಿನಿಯನ್ನು ಆಕೆಯ ಗೆಳತಿಯೊಬ್ಬಳು ವಾಟ್ಸಪ್ ಗ್ರೂಪ್‌ಗೆ ಸೇರ್ಪಡೆ ಮಾಡಿದ್ದಳು. ಅದೇ ಗ್ರೂಪ್‌ನಲ್ಲಿ ವಿದ್ಯಾರ್ಥಿನಿಗೆ ರಫಾ ಎಂಬ ಹೆಸರಿನ ವಿದ್ಯಾರ್ಥಿನಿಯ ಪರಿಚಯವಾಗಿತ್ತು. ವಿದ್ಯಾರ್ಥಿನಿ ವಾಟ್ಸಪ್ ಗ್ರೂಪ್‌ನಿಂದ ಹೊರ ಬಂದಿದ್ದರೂ ರಫಾ ವಾಟ್ಸಪ್‌ನಲ್ಲಿ ಮೆಸೇಜ್ ಮಾಡುತ್ತಲೇ ಇರುತ್ತಿದ್ದಳು. ವಿದ್ಯಾರ್ಥಿನಿ ಕೂಡಾ ಆ ಮೆಸೇಜ್ ಪ್ರತಿಕ್ರಿಯೆ ನೀಡುತ್ತಿದ್ದಳು. ದಿನ ಕಳೆದಂತೆ ವಿದ್ಯಾರ್ಥಿನಿಯ ಹುಟ್ಟು ಹಬ್ಬಕ್ಕೆ ರಫಾ ವಿಷ್ ಮಾಡುತ್ತಾಳೆ, ಮಾತ್ರವಲ್ಲದೆ ತನ್ನ ಸಂಬಂಧಿಕರೊಬ್ಬನ ಬಳಿ ಹೂಗುಚ್ಛ  ಕಳುಹಿಸಿಕೊಡುವ ಬಗ್ಗೆ ತಿಳಿಸುತ್ತಾಳೆ. ಅದರಂತೆಯೇ ಕಾಲೇಜಿಗೆ ಬಂದು ಇರ್ಷಾದ್ ವಿದ್ಯಾರ್ಥಿನಿಗೆ ಹೂಗುಚ್ಛ ನೀಡಿ ವಿಷ್ ಮಾಡಿ ಹಿಂದಿರುಗುತ್ತಾನೆ. ಕೆಲವು ದಿನಗಳ ಬಳಿಕ ವಿದ್ಯಾರ್ಥಿನಿ ತನ್ನ ಊರಿನಿಂದ ಕಾಲೇಜಿಗೆ ತರಳಲು ವಿಳಂಬ ಆಗುತ್ತಿದ್ದು, ತರಗತಿಗೆ ಹಾಜರಾಗಲು ಲೇಟ್ ಆಗುವ ಬಗ್ಗೆ ಹೇಳಿಕೊಳ್ಳುತ್ತಾಳೆ. ಅದಕ್ಕೆ ರಫಾ ಪ್ರತಿಕ್ರಿಯಿಸಿ ನನಗೆ ನಾಳೆ ಮಂಗಳೂರಿಗೆ ಹೋಗಲಿಕ್ಕಿದ್ದು, ನಿನ್ನನ್ನೂ ಜೊತೆಗೆ ಕರೆದುಕೊಂಡು ಹೋಗುವುದಾಗಿ ತಿಳಿಸುತ್ತಾಳೆ. ವಿದ್ಯಾರ್ಥಿನಿ ಗೆಳತಿಯ ಮಾತನ್ನು ನಂಬುತ್ತಾಳೆ.

2015ರ ಜೂ. 20ರಂದು ಬೆಳಗ್ಗೆ 7:30ಕ್ಕೆ ವಿದ್ಯಾರ್ಥಿನಿ ಕಾಯುತ್ತಿದ್ದಲ್ಲಿಗೆ ಕಾರೊಂದು ಬರುತ್ತದೆ. ಆ ಕಾರನ್ನು ಇರ್ಷಾದ್ ಚಾಲನೆ ಮಾಡುತ್ತಿದ್ದ. ಕಾರಿನಲ್ಲಿ ಯುವಕನನ್ನು ನೋಡಿದ ವಿದ್ಯಾರ್ಥಿನಿ ರಫಾ ಎಲ್ಲಿ ಎಂದು ಪ್ರಶ್ನಿಸುತ್ತಾಳೆ. ರಫಾ ಮುಂದೆ ಕಾರಿಗೆ ಹತ್ತುತ್ತಾಳೆ ಎಂದು ಇರ್ಷಾದ್ ಉತ್ತರಿಸುತ್ತಾನೆ. ಇರ್ಷಾದ್‌ನ ಮಾತನ್ನು ನಂಬಿದ ವಿದ್ಯಾರ್ಥಿನಿ ಕಾರನ್ನು ಹತ್ತುತ್ತಾಳೆ. ಬಳಿಕ ಇರ್ಷಾದ್ ವಿದ್ಯಾರ್ಥಿನಿಯನ್ನು ಬೆದರಿಸಿ ಅಪಹರಣ ಮಾಡಿ ಧಾರವಾಡಕ್ಕೆ ಕರೆದೊಯ್ಯುತ್ತಾನೆ. ಇತ್ತ ಸಂಜೆಯಾದರೂ ವಿದ್ಯಾರ್ಥಿನಿ ಮನೆಗೆ ತಲುಪದಿರುವುದನ್ನು ಗಮನಿಸಿದ ಪೋಷಕರು ಆತಂಕಗೊಂಡು ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೇ ಸಂದರ್ಭದಲ್ಲಿ ಇರ್ಷಾದ್ ಕುಟುಂಬ ಕೂಡ  ಇರ್ಷಾದ್ ನಾಪತ್ತೆಯಾದ ಬಗ್ಗೆ ಪ್ರತ್ಯೇಕ ದೂರು ದಾಖಲಿತ್ತು.

ವಿದ್ಯಾರ್ಥಿನಿಯನ್ನು ಧಾರವಾಡಕ್ಕೆ ಕರೆದೊಯ್ದು ಇರ್ಷಾದ್ ಅಲ್ಲಿ ಲಾಡ್ಜ್‌ನಲ್ಲಿ ಕೊಠಡಿ  ಪಡೆದು ಆಕೆಯ ಮೇಲೆ ಅತ್ಯಾಚಾರ ಎಸಗುತ್ತಾನೆ. ಅಲ್ಲದೆ, ಮರುದಿನ ಆಕೆಯನ್ನು ಗದಗ, ಹುಬ್ಬಳ್ಳಿಗೆ ಕರೆದೊಯ್ದು ಅಲ್ಲೂ ಅತ್ಯಾಚಾರ ಮಾಡುತ್ತಾನೆ ಎಂದು ಆರೋಪಿಸಲಾಗಿತ್ತು.

ಸತ್ಯ ಬಿಚ್ಚಿಟ್ಟ ಆರೋಪಿ ಇರ್ಷಾದ್‌

ಆದರೆ, ಇರ್ಷಾದ್ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಮುಂದೆ ಸತ್ಯವನ್ನು ಬಿಚ್ಚಿಟ್ಟುತ್ತಾನೆ. ‘‘ರಫಾ ಎನ್ನುವ ಹೆಸರಿನಲ್ಲಿ ವಾಟ್ಸ್‌ಆ್ಯಪ್‌ಗೆ ಸಂದೇಶ ಕಳುಹಿಸುತ್ತಿದ್ದದ್ದು ನಾನೇ ಎಂದು ಒಪ್ಪಿಕೊಳ್ಳುತ್ತಾನೆ. ಇದರಿಂದ ವಿದ್ಯಾರ್ಥಿನಿಗೆ ತಾನು ವಂಚನೆಗೊಳಗಾಗಿರುವ ಬಗ್ಗೆ ಗೊತ್ತಾಗುತ್ತದೆ. ನಾಪತ್ತೆ ಪ್ರಕರಣವನ್ನು ಬೆಂಬತ್ತಿದ್ದ ಪೊಲೀಸರು ಜೂ. 25ರಂದು ಇಬ್ಬರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ವಿದ್ಯಾರ್ಥಿನಿಯನ್ನು ಮಂಗಳೂರಿಗೆ ಕರೆದುಕೊಂಡು ಬಂದ ಪೊಲೀಸರು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿ ಪರೀಕ್ಷೆಗೊಳಪಡಿಸಿದ್ದರು. ಅಲ್ಲಿ ಅತ್ಯಾಚಾರ ಮಾಡಿರುವುದು ಸಾಬೀತಾಗಿದೆ.

ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿರುವಾಗ ಆರೋಪಿ ಇರ್ಷಾದ್‌ಗೆ ಬೇರೆ ಮದುವೆಯಾಗಿರುವ ಬಗ್ಗೆ ವಿಷಯ ತಿಳಿಯುತ್ತದೆ. ಇದರಿಂದ ವಿದ್ಯಾರ್ಥಿನಿ ಆಘಾತಕ್ಕೊಳಗಾಗುತ್ತಾಳೆ. ಇರ್ಷಾದ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ದೂರು ನೀಡಿದ್ದು, ಆತನ ಮೇಲೆ ಅಪಹರಣ (366), ಅತ್ಯಾಚಾರ (376), ಅಕ್ರಮ ಬಂಧನ (342), ಬೆದರಿಕೆ (506) ಪ್ರಕರಣ ದಾಖಲಾಗಿತ್ತು. ಬಂಟ್ವಾಳ ಠಾಣೆಯ ಅಂದಿನ ಇನ್‌ಸ್ಪೆಕ್ಟರ್ ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಲಾಡ್ಜ್ ದಾಖಲೆ ಮತ್ತು ಸಿಬ್ಬಂದಿ ಸಾಕ್ಷಿ, ಡಾಕ್ಟರ್ ವರದಿಗಳು ಸೇರಿದಂತೆ ಒಟ್ಟು 22 ಸಾಕ್ಷಿಯನ್ನಾಗಿ ಪರಿಗಣಿಸಲಾಗಿತ್ತು. ಸರಕಾರದ ಪರವಾಗಿ ಜುಡಿತ್ ಒ ಎಂ. ಕ್ರಾಸ್ತಾ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X