Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರದಿಂದ ಸರಕಾರಿ ಸಂಸ್ಥೆಗಳ...

ಕೇಂದ್ರದಿಂದ ಸರಕಾರಿ ಸಂಸ್ಥೆಗಳ ದುರುಪಯೋಗ: ಡಿಸಿಎಂ ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ20 Jun 2018 8:42 PM IST
share
ಕೇಂದ್ರದಿಂದ ಸರಕಾರಿ ಸಂಸ್ಥೆಗಳ ದುರುಪಯೋಗ: ಡಿಸಿಎಂ ಡಾ.ಜಿ.ಪರಮೇಶ್ವರ್

ತುಮಕೂರು,ಜೂ.20: ಚುನಾವಣಾ ಪೂರ್ವದಲ್ಲಿ ಕೇಂದ್ರ ಸರಕಾರ ಕಾಂಗ್ರೆಸ್ ಶಾಸಕರ ಮೇಲೆ ತನ್ನ ಅಧೀನದಲ್ಲಿರುವ ಸಂಸ್ಥೆಗಳ ಮೂಲಕ ಮಾಡಿದ ಅಧಿಕಾರ ದುರ್ಬಳಕೆಯನ್ನು ಚುನಾವಣೆ ನಂತರವೂ ಮುಂದುವರೆಸಿದೆ ಎಂದು ಉಪಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರು ನಗರಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಚುನಾವಣೆ ಪೂರ್ವದಲ್ಲಿ ಐಟಿ, ಸಿಬಿಐ ಮತ್ತಿತರರ ಕೇಂದ್ರ ಸರಕಾರದ ಅಧೀನದಲ್ಲಿರುವ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಶಾಸಕರನ್ನು ಹಣಿಯುವ ಕೆಲಸ ಮಾಡಿತ್ತು. ಚುನಾವಣೆಯ ನಂತರವೂ ಇದನ್ನು ಮುಂದುವರೆಸಿದೆ. ಈಗಾಗಲೇ ಐಟಿ ಸಂಸ್ಥೆ ನೀಡಿರುವ ನೊಟೀಸ್‍ಗೆ ಡಿ.ಕೆ.ಶಿವಕುಮಾರ್ ಕಾನೂನು ಪ್ರಕಾರ ಉತ್ತರ ನೀಡಿದ್ದಾರೆ. ಡಿಕೆಶಿ ಪರವಾಗಿ ಕಾಂಗ್ರೆಸ್ ಪಕ್ಷ ಕಾನೂನು ಹೋರಾಟ ನಡೆಸಲಿದೆ ಎಂದರು.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಹುಲ್‍ ಗಾಂಧಿ ಅವರನ್ನು ಭೇಟಿ ಮಾಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ದೆಹಲಿಗೆ ನೀತಿ ಆಯೋಗದ ಸಭೆ ಮತ್ತು ವಿವಿಧ ಇಲಾಖೆಗಳ ಮಂತ್ರಿಗಳನ್ನು ಭೇಟಿಯಾಗಲು ತೆರಳಿದ್ದ ಮುಖ್ಯಮಂತ್ರಿಗಳು, ಎಐಸಿಸಿ ಅಧ್ಯಕ್ಷ ರಾಹುಲ್‍ ಗಾಂಧಿ ಅವರ ಹುಟ್ಟು ಹಬ್ಬದ ಅಂಗವಾಗಿ ಅವರನ್ನು ಭೇಟಿಯಾಗಿ ಶುಭಾಶಯ ತಿಳಿಸಿದ್ದಾರೆ. ನಾನು ಸಹ ದೆಹಲಿಗೆ ಹೋಗಿ ರಾಹುಲ್‍ ಗಾಂಧಿ ಅವರನ್ನು ಭೇಟಿಯಾಗಿದ್ದೇನೆ. ಇದಕ್ಕೆ ಬೇರೆ ಅರ್ಥವನ್ನು ಮಾಧ್ಯಮಗಳು ಕಲ್ಪಿಸುತ್ತಿವೆ. ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಗೊಂದಲವಿಲ್ಲ. ಐದು ವರ್ಷ ಅಧಿಕಾರ ನಡೆಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ಸಾಲ ಮನ್ನಾ ಕುರಿತಂತೆ ಈಗಾಗಲೇ ಎರಡು ಪಕ್ಷಗಳು ಒಮ್ಮತಕ್ಕೆ ಬಂದಿವೆ. ನಾಲ ಮನ್ನಾ ಮಾಡಿಯೇ ತೀರುತ್ತೇವೆ. ಆದರೆ ಎಷ್ಟು ಸಾಲ, ಯಾವ ಯಾವ ಸಾಲ ಮನ್ನಾ ಮಾಡಬೇಕು, ಸಾಲಮನ್ನಾಕ್ಕೆ ಸಂಪನ್ಮೂಲ ಕ್ರೋಢೀಕರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ. ಸದ್ಯದಲ್ಲಿಯೇ ಈ ಬಗ್ಗೆ ಸ್ಪಷ್ಟ ನಿರ್ಧಾರವನ್ನು ಮುಖ್ಯಮಂತ್ರಿಗಳು ತಿಳಿಸಲಿದ್ದಾರೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X