ಮೈಸೂರು: ಹೃದಯಾಘಾತದಿಂದ ಯೋಧ ನಿಧನ

ಮೈಸೂರು,ಜೂ.20: ಭೂಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್.ನಗರದ ಯೋಧರೋರ್ವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೆ.ಆರ್.ನಗರದ ಮಾವತ್ತೂರು ಮಹೇಶ್ (38) ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದು, ಇವರು ಜಮ್ಮು-ಕಾಶ್ಮೀರದ ಭಾರತೀಯ ಭೂಸೇನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ವಾರ ಸ್ವಗ್ರಾಮ ಮಾವತ್ತೂರಿಗೆ ಬಂದಿದ್ದ ಅವರಿಗೆ ಸೋಮವಾರ ಸಂಜೆ ಸ್ವಗ್ರಾಮದಲ್ಲಿ ತೀವ್ರ ಹೃದಯಾಘಾತವಾಗಿತ್ತು.
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ಸಂಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇಂದು ಅವರ ಸ್ವಗ್ರಾಮ ಮಾವತ್ತೂರಿನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿತು.
Next Story





