Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಗುಂಪಿನಿಂದ ಹಲ್ಲೆಗೊಳಗಾದ...

ಬಂಟ್ವಾಳ: ಗುಂಪಿನಿಂದ ಹಲ್ಲೆಗೊಳಗಾದ ಯುವಕನಿಗೆ ಪೊಲೀಸರಿಂದ ದೌರ್ಜನ್ಯ ಆರೋಪ

ಯಾವುದೇ ಹಲ್ಲೆ ಅಥವಾ ದೌರ್ಜನ್ಯ ನಡೆದಿಲ್ಲ: ಎಸ್ಸೈ ಪ್ರಸನ್ನ

ವಾರ್ತಾಭಾರತಿವಾರ್ತಾಭಾರತಿ20 Jun 2018 11:04 PM IST
share
ಬಂಟ್ವಾಳ: ಗುಂಪಿನಿಂದ ಹಲ್ಲೆಗೊಳಗಾದ ಯುವಕನಿಗೆ ಪೊಲೀಸರಿಂದ ದೌರ್ಜನ್ಯ ಆರೋಪ

‘ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವನನ್ನು ಠಾಣೆಗೊಯ್ದು ಹಲ್ಲೆ’

ಮಂಗಳೂರು, ಜೂ. 20: ಬಂಟ್ವಾಳದ ಅಮೈ ಎಂಬಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವನನ್ನು ಪೊಲೀಸರು ಡಿಸ್ಚಾರ್ಜ್ ಮಾಡಿಸಿ ಠಾಣೆಗೊಯ್ದು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ಯುವಕನನ್ನು ಬಂಟ್ವಾಳ ತಾಲೂಕಿನ ಪೆರ್ನೆಯ ಪುರಿಯಾ ನಿವಾಸಿ ಹಾಗೂ ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಅಬ್ದುರ್ರಹ್ಮಾನ್ (28) ಎಂದು ಗುರುತಿಸಲಾಗಿದೆ.

ಜೂ. 18ರಂದು ರಹ್ಮಾನ್ ವಿಟ್ಲದಿಂದ ಬರುತ್ತಿದ್ದಾಗ ಅಮೈ ಎಂಬಲ್ಲಿ ಆಟೋದಲ್ಲಿನ ಪೆಟ್ರೋಲ್ ಖಾಲಿಯಾಗಿತ್ತು. ಪೆಟ್ರೋಲ್ ತರಲೆಂದು ಬಂಕ್ ಕಡೆಗೆ ಹೋಗುತ್ತಿದ್ದಾಗ ದಾರಿ ಮಧ್ಯೆ ಯುವಕರ ಗುಂಪೊಂದು ಚರ್ಚಿಸುತ್ತಿತ್ತು. ಅಲ್ಲಿ ನಿಂತಿದ್ದ ರಹ್ಮಾನ್‌ನನ್ನು ಆ ಗುಂಪಿನಲ್ಲಿದ್ದ ಕೆಲವರು ವಿಚಾರಿಸಿದ್ದು, ಬಳಿಕ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಸ್ವಲ್ಪ ಸಮಯದ ಬಳಿಕ ಮತ್ತೆ ಕೆಲವರು ಬಂದು ಹೊಡೆದಿದ್ದಾರೆ ಎಂದು ರಹ್ಮಾನ್ ಆರೋಪ ಮಾಡಿದ್ದಾರೆ.

ಹಲ್ಲೆಗೊಳಗಾದ ರಹ್ಮಾನ್‌ನನ್ನು ಸ್ಥಳೀಯರು ಅದೇ ದಿನ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾಹಿತಿ ಕಲೆ ಹಾಕಲು ಬಂದಿದ್ದ ಪುತ್ತೂರು ನಗರ ಠಾಣೆ ಪೊಲೀಸರು ಸಂಜೆ ಸುಮಾರು 7 ಗಂಟೆಯ ಹೊತ್ತಿಗೆ ಯಾವುದೇ ಸೂಚನೆ ನೀಡದೆ ಆಸ್ಪತ್ರೆಯಿಂದ ಕರೆದೊಯ್ದಿದ್ದಾರೆ ಎನ್ನಲಾಗಿದ್ದು,  ಪುತ್ತೂರು ನಗರ ಠಾಣೆಯಲ್ಲಿ ಕುಳ್ಳಿರಿಸಿ ಬಳಿಕ ಜಿಪೊಂದರಲ್ಲಿ ಅಲ್ಲಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಕರೆದುಕೊಂಡು ಬಂದಿದ್ದಾರೆ.

ಬರುವಾಗ ಜೀಪಿನಲ್ಲೇ ತನಗೆ ಹಲ್ಲೆ ನಡೆಸಿದ್ದಾರೆ. ಕೆನ್ನೆ ಮತ್ತು ಕಿವಿಯ ಭಾಗಗಳಿಗೆ ಹೊಡೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದ ನಂತರ ರಾತ್ರಿ 12 ಗಂಟೆಯ ವರೆಗೂ ನನಗೆ, ತಲೆ, ಕವಿಯ ಭಾಗ, ಕೈ ಕಾಲುಗಳಿಗೆ ಹೊಡೆದಿದ್ದಾರೆ. ಹಲ್ಲೆಯಿಂದ ತನ್ನ ಕೈ ಕಾಲುಗಳಲ್ಲಿ ನೋವು ಕಾಣಿಸಿಕೊಂಡಿದ್ದು, ರಕ್ತ ಹೆಪ್ಪುಗಟ್ಟಿದೆ. ಎರಡೂ ಕಿವಿಗಳು ಸರಿಯಾಗಿ ಕೇಳುತ್ತಿಲ್ಲ ಎಂದು ರಹ್ಮಾನ್ ಪೊಲೀಸ್ ದೌರ್ಜನ್ಯದ ಬಗ್ಗೆ ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ರಹ್ಮಾನ್‌ರ ಹಿರಿಯ ಸಹೋದರ ಅಶ್ರಫ್ ಅವರು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಿಲಿಸಿರುವ ನನ್ನ ತಮ್ಮನನ್ನು ಪೊಲೀಸರು ಠಾಣೆಗೆ ಕರೆದೊಯ್ದ ಬಗ್ಗೆ ನಮಗೆ ಯಾವುದೇ ಮಾಹಿತಿ ನೀಡಿಲ್ಲ. ಜೂ. 19ರಂದು ಫೋನ್ ಮಾಡಿ ರಹ್ಮಾನ್ ಪೊಲೀಸ್ ಠಾಣೆಯಲ್ಲಿದ್ದಾರೆ ಎಂದು ಹೇಳಿದ್ದಾರೆ. ಅದರಂತೆ ನಾವು ನ್ಯಾಯವಾದಿಯವರನ್ನು ಸಂಪರ್ಕಿಸಿದ್ದು, ಜಾಮೀನು ಮೇಲೆ ರಹ್ಮಾನ್ ಜೂ. 19ರಂದು ಬಿಡೆಗಡೆಗೊಂಡಿದ್ದಾರೆ.

ಅದೇ ದಿನ ಸಂಜೆಯಾಗುತ್ತಿದ್ದಂತೆ ರಹ್ಮಾನ್‌ಗೆ ಸರಿಯಾಗಿ ನಡೆದಾಡಲು ಆಗದಿರುವುದನ್ನು ಹಾಗೂ ಎರಡೂ ಕಿವಿಗಳು ಸರಿಯಾಗಿ ಕೇಳಿಸದೇ ಇರುವುದರಿಂದ  ರಾತ್ರಿ ಸುಮಾರು 9 ಗಂಟೆಗೆ ನಗರಕ್ಕೆ ಬಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದು ವಿವರಿಸಿದ್ದಾರೆ.

ಅಮೈಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಪೊಲೀಸರು ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿರುವ ರಹ್ಮಾನ್ ಘಟನೆಯಲ್ಲಿ ಕಡೇಶ್ವಾಲ್ಯ ಗ್ರಾ.ಪಂ. ಸದಸ್ಯ ಸನತ್ ಮತ್ತು ಪೆರ್ನೆ ಗ್ರಾಮದ ಕಾರ್ಲ ಎಂಬಲ್ಲಿನ ಮನೋಜ್ ಪ್ರಮುಖ ಆರೋಪಿಯಾಗಿದ್ದಾರೆ. ಮನೋಜ್ ತನ್ನನ್ನು ಹಿಡಿದುಕೊಂಡಿದ್ದರೆ, ಸನತ್ ಹೊಡೆಯುತ್ತಿದ್ದ. ಅಲ್ಲದೆ ಅಲ್ಲಿದ್ದ ಇತರರೂ ಹಲ್ಲೆ ನಡೆಸಿದ್ದಾರೆ ಎಂದು ರಹ್ಮಾನ್ ಘಟನೆಯನ್ನು ವಿವರಿಸಿದ್ದಾರೆ.

ಹಲ್ಲೆ ನಡೆಸಿರುವ ಆರೋಪಿಗಳ ಪೈಕಿ ಸನತ್ ಇತರರೊಂದಿಗೆ ರಹ್ಮಾನ್ ಮನೆಗೆ ಬಂದು ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ರಹ್ಮಾನ್‌ರ ಸಹೋದರಿ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದರೂ ಸುಮಾರು ಸಂಜೆ 7 ಗಂಟೆಯಿಂದ ರಾತ್ರಿ 12ಗಂಟೆಯವರೆಗೆ ಕಾಯಿಸಿದ್ದಾರೆ ಎಂದು ಅಶ್ರಫ್ ಆರೋಪಿಸಿದ್ದಾರೆ.

ಯಾವುದೇ ಹಲ್ಲೆ ಅಥವಾ ದೌರ್ಜನ್ಯ ನಡೆದಿಲ್ಲ: ಎಸ್ಸೈ ಪ್ರಸನ್ನ

ಎರಡು ಗುಂಪುಗಳ ಮಧ್ಯೆ ಘಟನೆ ನಡೆದಿದೆ. ಈ ಬಗ್ಗೆ ಮಾಹಿತಿ ಕಲೆ ಹಾಕಿ ಅದರ ಪ್ರಕಾರ ಪ್ರಕರಣ ದಾಖಲಿಸಿದ್ದೇವೆ. ಈ ಬಗ್ಗೆ ಓರ್ವನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೇವೆ. ತಕ್ಷಣವೇ ಜಾಮೀನಿನ ಮೇಲೆ ಬಿಡುಗಡೆಯಾಗಿದೆ. ಘಟನೆಗೆ ಸಂಬಂಧಿಸಿ ಬಂಟ್ವಾಳ ಠಾಣೆಗೆ ಕರೆ ತಂದು ವಿಚಾರಣೆ ಮಾಡಿದ್ದೇವೆ. ಆದರೆ, ಯಾವುದೇ ಹಲ್ಲೆ ಅಥವಾ ದೌರ್ಜನ್ಯ ಮಾಡಿಲ್ಲ. ಆತನನ್ನು ಓಪನ್ ಕೋರ್ಟ್‌ನಲ್ಲಿಯೇ ಹಾಜರು ಪಡಿಸಿದ್ದೇವೆ. ಒಂದು ವೇಳೆ ಹಲ್ಲೆ ಮಾಡಿದ್ದೇ ಆದಲ್ಲಿ ನ್ಯಾಯಾಧೀಶರ ಮುಂದೆ ಹೇಳಬಹುದಿತ್ತು. ಇದೀಗ ಹೊರಗಡೆ ಬಂದ ಮೇಲೆ ಆರೋಪ ಮಾಡುತ್ತಿದ್ದಾರೆ.
- ಎಸ್ಸೈ ಪ್ರಸನ್ನ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X