Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿರೂರು: ರಾ. ಹೆದ್ದಾರಿ ಬಳಿ ಪಡಿತರ...

ಶಿರೂರು: ರಾ. ಹೆದ್ದಾರಿ ಬಳಿ ಪಡಿತರ ಚೀಟಿಗಳ ಮೂಟೆ ಪತ್ತೆ

ವಾರ್ತಾಭಾರತಿವಾರ್ತಾಭಾರತಿ21 Jun 2018 7:46 PM IST
share
ಶಿರೂರು: ರಾ. ಹೆದ್ದಾರಿ ಬಳಿ ಪಡಿತರ ಚೀಟಿಗಳ ಮೂಟೆ ಪತ್ತೆ

 ಬೈಂದೂರು, ಜೂ.21: ಶಿರೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ಪಡಿತರ ಚೀಟಿಗಳನ್ನು ಒಳಗೊಂಡ ಮೂಟೆಯೊಂದು ಇಂದು ಅಪರಾಹ್ನ ಪತ್ತೆಯಾಗಿದೆ.

ಬಂಟ್ವಾಳ ತಾಲೂಕಿಗೆ ಸಂಬಂಧಪಟ್ಟ ಈ ಪಡಿತರ ಚೀಟಿಗಳನ್ನು ದೊಡ್ಡ ಸಿಮೆಂಟ್ ಚೀಲದಲ್ಲಿ ತುಂಬಿಸಿ ಶಿರೂರು ಗ್ರೀನ್‌ವ್ಯಾಲಿ ಶಾಲೆ ಎದುರಿನ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಎಸೆಯಲಾಗಿತ್ತು. ಇಂದು ಅಪರಾಹ್ನ 12 ಗಂಟೆ ಸುಮಾರಿಗೆ ಮಾಹಿತಿ ಸಿಕ್ಕಿ ತಾವು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಅವುಗಳು ರದ್ದಾದ ಹಳೆಯ ಪಡಿತರ ಚೀಟಿಗಳಂತೆ ಕಂಡುಬಂದವು ಎಂದು ಬೈಂದೂರಿನ ತಹಶೀಲ್ದಾರ್ ತಿಳಿಸಿದರು.

2008ರಿಂದ 2015-16ರಲ್ಲಿ ನೀಡಲಾದ ಪಡಿತರ ಚೀಟಿಗಳು ಇದರಲ್ಲಿದ್ದು, ಅಂತ್ಯೋದಯ, ಬಿಪಿಎಲ್, ಎಪಿಎಲ್ ಎಲ್ಲಾ ವರ್ಗದ ಪಡಿತರ ಚೀಟಿಗಳು ಇದರಲ್ಲಿ ಇರುವುದು ಕಂಡುಬಂದಿದೆ ಎಂದು ಬೈಂದೂರಿನ ಕಂದಾಯ ನಿರೀಕ್ಷಕರು ತಿಳಿಸಿದ್ದಾರೆ.

ಹಳೆಯದಾದ ಈ ಪಡಿತರ ಚೀಟಿಗಳ ಮೂಟೆಯನ್ನು ಯಾರು, ಯಾವಾಗ, ಯಾಕಾಗಿ ಇಲ್ಲಿ ಎಸೆದುಹೋಗಿದ್ದಾರೆ ಎಂಬುದು ಇನ್ನೂ ಗೊತ್ತಾಗಿಲ್ಲ. ಈ ಬಗ್ಗೆ ಬಂಟ್ವಾಳ ತಾಲೂಕು ಕಚೇರಿಗೆ ಮಾಹಿತಿ ನೀಡಲಾಗಿದೆ. ಅಲ್ಲಿಂದ ಉತ್ತರವನ್ನು ನಿರೀಕ್ಷಿಸಲಾಗಿದೆ ಎಂದವರು ತಿಳಿಸಿದರು.

ಬೈಂದೂರು ಪಿಎಸ್‌ಐ, ತಹಶೀಲ್ದಾರ್, ಕಂದಾಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳದಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳ ಮಹಜರ್ ನಡೆಸಲಾಗಿದ್ದು, ಇವುಗಳನ್ನು ಮುಂದಿನ ಕ್ರಮಕ್ಕಾಗಿ ಕುಂದಾಪುರ ತಾಲೂಕು ಕಚೇರಿಯ ಆಹಾರ ನಿರೀಕ್ಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಕಂದಾಯ ನಿರೀಕ್ಷಕರು ತಿಳಿಸಿದರು.

ಜಿಲ್ಲಾಧಿಕಾರಿ ಸ್ಪಷ್ಟೀಕರಣ
ಶಿರೂರು ಗ್ರಾಮದ ಗ್ರೀನ್‌ವ್ಯಾಲಿ ಶಾಲೆ ಎದುರಿನ ರಾ.ಹೆದ್ದಾರಿ ಪಕ್ಕದಲ್ಲಿ ಮೂಟೆಯೊಂದರಲ್ಲಿ ದೊರೆತ ಪಡಿತರ ಚೀಟಿಗಳನ್ನು ಬೈಂದೂರು ತಹಶೀಲ್ದಾರ್ ಕಚೇರಿಗೆ ತಂದು ಪರಿಶೀಲಿಸಲಾಗಿದೆ. ಗೋಣಿ ಚೀಲದಲ್ಲಿ ಸುಮಾರು 2,000 ಪಡಿತರ ಚೀಟಿಗಳಿದ್ದು, ಇವು ಹೊಸ ಪಡಿತರ ಚೀಟಿ ನೀಡುವಾಗ ಹಿಂದಕ್ಕೆ ಪಡೆದ ಹಳೆ ಪಡಿತರ ಚೀಟಿಗಳಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿಗೆ ಸಂಬಂಧಿಸಿದ ಪಡಿತರ ಚೀಟಿಗಳೆಂದು ಕಂಡುಬಂದಿದೆ.

ಈ ಪಡಿತರ ಚೀಟಿಗಳನ್ನು ಪಡೆದು ನಿಯಮಾನುಸಾರ ವಿಲೆ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪತ್ರಿಕಾ ಹೇಳಿಕೆ ಯೊಂದರಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X