Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ್ಯಾಯಬೆಲೆ ಅಂಗಡಿಗಳಿಗೆ ತೂಕಮಾಪನ ಯಂತ್ರ...

ನ್ಯಾಯಬೆಲೆ ಅಂಗಡಿಗಳಿಗೆ ತೂಕಮಾಪನ ಯಂತ್ರ ಅಳವಡಿಕೆ: ಸಚಿವ ಝಮೀರ್‌ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ21 Jun 2018 8:00 PM IST
share
ನ್ಯಾಯಬೆಲೆ ಅಂಗಡಿಗಳಿಗೆ ತೂಕಮಾಪನ ಯಂತ್ರ ಅಳವಡಿಕೆ: ಸಚಿವ ಝಮೀರ್‌ ಅಹ್ಮದ್

ಬೆಂಗಳೂರು, ಜೂ.21: ರಾಜ್ಯದಲ್ಲಿ 20 ಸಾವಿರ ನ್ಯಾಯ ಬೆಲೆ ಅಂಗಡಿಗಳಿವೆ. ಜನರಿಗೆ ಯಾವುದೇ ರೀತಿಯ ವಂಚನೆಯಾಗದಂತೆ ತಡೆಯಲು ಇಲಾಖೆಯ ವತಿಯಿಂದಲೇ ತೂಕಮಾಪನ ಯಂತ್ರಗಳನ್ನು ಖರೀದಿಸಿ ಹಂಚಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಬಿ.ಝೆಡ್. ಝಮೀರ್‌ ಅಹ್ಮದ್‌ ಖಾನ್ ತಿಳಿಸಿದರು.

ನಗರದ ರಿಚ್ಮಂಡ್‌ ಟೌನ್‌ನಲ್ಲಿರುವ ರಾಜ್ಯ ಹಜ್ ಸಮಿತಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ತೂಕಮಾಪನ ಯಂತ್ರಕ್ಕೆ ಕನಿಷ್ಠ 15 ಸಾವಿರ ರೂ.ಗಳಂತೆ, 20 ಸಾವಿರ ಯಂತ್ರಗಳ ಖರೀದಿಗೆ 30 ಕೋಟಿ ರೂ.ಅಗತ್ಯವಿದೆ ಎಂದರು.

ಸರಕಾರವು ನ್ಯಾಯ ಬೆಲೆ ಅಂಗಡಿ ಮಾಲಕರಿಗೆ ಒಂದು ಕ್ವಿಂಟಾಲ್‌ಗೆ ನೀಡುತ್ತಿದ್ದ ಕಮಿಷನ್ ಹಣವನ್ನು 87 ರೂ.ಗಳಿಂದ 100 ರೂ.ಗಳಿಗೆ ಹೆಚ್ಚಿಸಲಾಗಿದೆ. ತೂಕ ಮಾಪನ ಯಂತ್ರಗಳ ಖರೀದಿಗೆ ವ್ಯಯಿಸಲಾಗುವ ಹಣವನ್ನು ಅಂಗಡಿ ಮಾಲಕರಿಂದಲೇ ಕಂತಿನ ರೂಪದಲ್ಲಿ ಪಡೆಯಲಾಗುವುದು. ಇದರಿಂದ ಸರಕಾರದ ಮೇಲೆ ಯಾವುದೇ ಆರ್ಥಿಕ ಹೊರೆ ಬೀಳುವುದಿಲ್ಲ ಎಂದು ಅವರು ಹೇಳಿದರು.

ಪ್ರತಿಯೊಂದು ತಾಲೂಕುಗಳಲ್ಲಿ ಮೂರು ದಿನ ಪ್ರವಾಸ ಕೈಗೊಂಡು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ತಾಲೂಕು ಮಟ್ಟದಲ್ಲಿ ಜನತಾ ದರ್ಶನ ನಡೆಸಲಾಗುವುದು. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಿಂದ ಈ ಜನತಾ ದರ್ಶನ ಆರಂಭಗೊಳ್ಳಲಿದೆ ಎಂದು ಝಮೀರ್‌ಅಹ್ಮದ್ ತಿಳಿಸಿದರು.

ಅಲ್ಪಸಂಖ್ಯಾತರ ಬಾಹುಳ್ಯವಿರುವ ಪ್ರದೇಶಗಳ ಅಭಿವೃದ್ಧಿಗೆ ಹಿಂದಿನ ಸರಕಾರ ಜಾರಿಗೆ ತಂದಿದ್ದ ಯೋಜನೆಯಡಿ, ಆಯಾ ತಾಲೂಕಿನಲ್ಲಿರುವ ಅಲ್ಪಸಂಖ್ಯಾತರ ಪ್ರದೇಶಗಳಲ್ಲಿ ಕೈಗೊಳ್ಳಬೇಕಿರುವ ಕಾಮಗಾರಿಗಳ ಪಟ್ಟಿ ಮಾಡಿ ಸ್ಥಳದಲ್ಲೇ 5-6 ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗುವುದು ಎಂದು ಅವರು ಹೇಳಿದರು.

ಮಲೆನಾಡು, ಗುಡ್ಡಗಾಡು ಪ್ರದೇಶಗಳಿರುವ 4-5 ತಾಲೂಕುಗಳಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋಮೆಟ್ರಿಕ್ ಸಮಪರ್ಕವಾಗಿ ಕಾರ್ಯನಿರ್ವಹಿಸುವುದಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅಂತಹ ಪ್ರದೇಶಗಳಲ್ಲಿ ಇಬ್ಬರು ಸದಸ್ಯರು ಇರುವ ವಿಚಕ್ಷಣ ಸಮಿತಿಗಳನ್ನು ರಚಿಸಿ, ಅವರ ದೃಢೀಕರಣವಿದ್ದಲ್ಲಿ ಪಡಿತರ ವಿತರಿಸಲು ನಿರ್ಧರಿಸಲಾಗಿದೆ.
-ಝಮೀರ್‌ ಅಹ್ಮದ್‌ ಖಾನ್, ಆಹಾರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X