ಪಿಯು ಉಪನ್ಯಾಸಕರ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಬೆಂಗಳೂರು, ಜೂ.21: ಪ್ರಸಕ್ತ ಸಾಲಿನ ಪದವಿ ಪೂರ್ವ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಕೌನ್ಸೆಲಿಂಗ್ ನಡೆಸಲು ಪರಿಷ್ಕೃತ ವೇಳಾಪಟ್ಟಿಯನ್ನು ಇಲಾಖೆ ಪ್ರಕಟಿಸಿದೆ.
ಜೂ. 21ರಿಂದ ಆರಂಭವಾಗಬೇಕಿದ್ದ ಗಣಕೀಕೃತ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ಜೂ.26ರಿಂದ ಪ್ರಾರಂಭವಾಗಲಿದೆ. ಅರ್ಜಿ ಜೊತೆ ಸಲ್ಲಿಸಿರುವ ಮೂಲ ಪ್ರಮಾಣಪತ್ರ, ಗುರುತಿನ ಚೀಟಿಯನ್ನು ಕೌನ್ಸೆಲಿಂಗ್ ವೇಳೆಯಲ್ಲಿ ಹಾಜರುಪಡಿಸುವುದು ಕಡ್ಡಾಯವಾಗಿದ್ದು, ತಪ್ಪಿದಲ್ಲಿ ಆದ್ಯತೆಯನ್ನು ಪರಿಗಣಿಸುವುದಿಲ್ಲ ಎಂದು ಇಲಾಖೆ ಸೂಚಿಸಿದೆ.
Next Story





