ದ.ಕ.: ಎಸ್ಡಿಪಿಐನಿಂದ ಸಂಸ್ಥಾಪನಾ ದಿನಾಚರಣೆ
ಮಂಗಳೂರು, ಜೂ.21: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿಯಿಂದ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಪಕ್ಷದ ಧ್ವಜಾರೋಹಣವನ್ನು ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ನೆರವೇರಿಸಿದರು.
ಸಂಸ್ಥಾಪನಾ ದಿನಾಚರಣೆಯ ಬಗ್ಗೆ ಎಸ್ಡಿಟಿಯು ರಾಜ್ಯಾಧ್ಯಕ್ಷ ಜಲೀಲ್.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಾಪ್ಯುಲರ್ ಫ್ರಂಟ್ ಜಿಲ್ಲಾಧ್ಯಕ್ಷ ನವಾಝ್ ಉಳ್ಳಾಲ, ಬಂಟ್ವಾಳ ಪುರಸಭಾ ಸದಸ್ಯ ಇಕ್ಬಾಲ್ ಐ.ಎಂ.ಆರ್. ಇನ್ನಿತರರು ಉಪಸ್ಥಿತರಿದ್ದರು. ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಸ್ವಾಗತಿಸಿದರು. ಕಾರ್ಯದರ್ಶಿ ಆಶ್ರಫ್ ಮಂಚಿ ವಂದಿಸಿದರು.
Next Story