ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಯೋಗ ದಿನಾಚರಣೆ

ಮಣಿಪಾಲ, ಜೂ.21: ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಇಂದು ನಾಲ್ಕನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಸಂಸ್ಥೆಯಲ್ಲಿ ನಡೆದ ಪ್ರೌಢಶಾಲಾ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಸಂಸ್ಥೆ ಅಧ್ಯಕ್ಷ ಡಾ.ವಿಜಯಭಾನು ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸಂಸ್ಥೆಯ ಪ್ರಾಂಶುಪಾಲ ಡಾ. ಸತ್ಯನಾರಾಯಣ ಯೋಗದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಯೋಗಾಸನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ವಿತರಿಸಲಾಯಿತು. ವೈಯಕ್ತಿಕ ಸ್ಪರ್ಧೆಯಲ್ಲಿ ಹನುಮಂತ ನಗರ ಸರಕಾರಿ ಪ್ರೌಢ ಶಾಲೆಯ ಸ್ಪೂರ್ತಿ ಪ್ರಥಮ, ರಾಜೀವನಗರ ಸರಕಾರಿ ಪ್ರೌಢ ಶಾಲೆಯ ಸುಧರ್ಮ ಹಾಗೂ ಮಾಧವ ಕೃಪಾದ ಮಧು ಉಪಾಧ್ಯಾಯ ದ್ವಿತೀಯ ಸ್ಥಾನವನ್ನು ಹಂಚಿಕೊಂಡರು.
ಗುಂಪು ಸ್ಪರ್ಧೆಯಲ್ಲಿ ಮಾಧವ ಕೃಪಾ ಶಾಲೆಯ ವಿದ್ಯಾರ್ಥಿಗಳು ವಿಜೇತ ರಾದರು. ನಂತರ ಯೋಗದ ಮಹತ್ವವನ್ನು ಸಾರುವ ಪ್ರಹಸನ ಮತ್ತು ವಿವಿಧ ಯೋಗಾಸನಗಳನ್ನು ಸಂಸ್ಥೆಯ ವಿದ್ಯಾರ್ಥಿಗಳು ಪ್ರದರ್ಶಿಸಿದರು. ಡಾ. ಶುಭ ಸ್ವಾಗತಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.
Next Story





