ತಲಪಾಡಿ ಟೋಲ್‌ಗೇಟ್ ವಿರುದ್ಧ ಸ್ಥಳೀಯರ ಪ್ರತಿಭಟನೆ

ಮಂಗಳೂರು, ಜೂ .22: ತಲಪಾಡಿ ಟೋಲ್‌ಗೇಟ್‌ನಲ್ಲಿ ಒಂದು ವಾರದಿಂದ ಸ್ಥಳೀಯರಿಂದ ಟೋಲ್ ಸಂಗ್ರಹ ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್, ಬಿಜೆಪಿ ಹಾಗೂ ವಿವಿಧ ಸಂಘಟನೆಗಳು ಪಕ್ಷಾತೀತವಾಗಿ ಶುಕ್ರವಾರ ಪ್ರತಿಭಟನೆ ನಡೆಸಿದವು.
ತಲಪಾಡಿ ಟೋಲ್‌ಗೇಟ್ ಸಿಬ್ಬಂದಿಯನ್ನು ವಿವಿಧ ಪಕ್ಷಗಳು ಹಾಗೂ ಸ್ಥಳೀಯರು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ.
ಪ್ರತಿಭಟನೆಯಲ್ಲಿ ಗಡಿನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಸಿದ್ದೀಕ್ ತಲಪಾಡಿ, ತಲಪಾಡಿ ಗ್ರಾಪಂ ಅಧ್ಯಕ್ಷ ಸುರೇಶ್ ಆಳ್ವ, ತಾಪಂ ಸದಸ್ಯ ಸಿದ್ದೀಕ್ ಕೊಲಂಗೆರೆ, ಕಾಂಗ್ರೆಸ್ ಮುಖಂಡ ಗಣೇಶ್ ತಲಪಾಡಿ ಹಾಗು ಇತರರು ಪಾಲ್ಗೊಂಡಿದ್ದರು.
Next Story





