ಉಡುಪಿ: ಜೂ.26ರಂದು ಉದ್ಯೋಗ ಮೇಳ
ಉಡುಪಿ, ಜೂ. 22: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾ ಲಯ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉಡುಪಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬಿದ್ಕಲ್ಕಟ್ಟೆ, ಹಂಗಳೂರು, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಜೂ.26ರಂದು ಬೆಳಗ್ಗೆ 10 ಗಂಟೆಗೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬಿದ್ಕಲ್ಕಟ್ಟೆ, ಹಂಗಳೂರು, ಕುಂದಾಪುರ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿ/ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಆಸಕ್ತ ಅಭ್ಯರ್ಥಿಗಳು ಎಸೆಸೆಲ್ಸಿ/ಪಿಯುಸಿ/ ಯಾವುದೇ ಪದವಿ/ ಡಿಪ್ಲೋಮ/ ಐಟಿಐ/ ಸ್ನಾತಕೋತ್ತರ ಹಾಗೂ ಕ್ಷೇತ್ರಕ್ಕೆ ಸಂಬಂಧಿಸಿದ, ವಿದ್ಯಾರ್ಹತೆ ಅಂಕಪಟ್ಟಿ /ರೆಸ್ಯೂಮ್(ಬಯೋಡೇಟಾ) ಇತ್ಯಾದಿ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉಡುಪಿ ಇವರ ಪ್ರಕಟಣೆ ತಿಳಿಸಿದೆ.
Next Story