Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲೋಕಾಯುಕ್ತ ನ್ಯಾ.ವಿಶ್ವನಾಥ...

ಲೋಕಾಯುಕ್ತ ನ್ಯಾ.ವಿಶ್ವನಾಥ ವೆನ್ಲಾಕ್-ಲೇಡಿಗೋಶನ್ ಆಸ್ಪತ್ರೆಗೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ22 Jun 2018 11:01 PM IST
share
ಲೋಕಾಯುಕ್ತ ನ್ಯಾ.ವಿಶ್ವನಾಥ ವೆನ್ಲಾಕ್-ಲೇಡಿಗೋಶನ್ ಆಸ್ಪತ್ರೆಗೆ ಭೇಟಿ

ಮಂಗಳೂರು, ಜೂ.22: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಅವರು ಶುಕ್ರವಾರ ಜಿಲ್ಲಾ ವೆನ್ಲಾಕ್ ಮತ್ತು ಲೇಡಿಗೋಶನ್ ಆಸ್ಪತ್ರೆಗೆ ಭೇಟಿ ನೀಡಿ ಕುಂದು ಕೊರತೆಯ ಬಗ್ಗೆ ಅಧಿಕಾರಿಗಳನ್ನು ವಿಚಾರಿಸಿದರು.

ವೆನ್ಲಾಕ್‌ಗೆ ದಿಢೀರ್ ಭೇಟಿ ನೀಡಿದ ಅವರು ವಿವಿಧ ವಿಭಾಗಗಳನ್ನು ಪರಿಶೀಲಿಸಿದರು. ಅಲ್ಲದೆ ರೋಗಿಗಳು ಮತ್ತು ಸಂದರ್ಶಕರ ಜೊತೆ ಮಾತುಕತೆ ನಡೆಸಿದರು. ಬಳಿಕ ಲೇಡಿಗೋಶನ್ ಆಸ್ಪತ್ರೆಗೂ ಭೇಟಿ ನೀಡಿ ಪರಿಶೀಲಿಸಿದರು.

ರೋಗಿಗಳಿಗೆ ಯಾವುದೇ ರೀತಿಯಲ್ಲೂ ಸಮಸ್ಯೆಗಳಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಲೋಕಾಯುಕ್ತರು ಸರಕಾರದ ವತಿಯಿಂದ ಆಗಬೇಕಾದ ಕೆಲಸ ಕಾರ್ಯಗಳ ಬಗ್ಗೆ ಗಮನ ಸೆಳೆಯುವಂತೆ ಸೂಚಿಸಿದರು.

ವೈದ್ಯರ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ನ್ಯಾ. ವಿಶ್ವನಾಥ ಶೆಟ್ಟಿ ಆಸ್ಪತ್ರೆಯ ಕಟ್ಟಡ, ಐಸಿಯು, ವೈದ್ಯಕೀಯ ಸಲಕರಣೆ ಇತ್ಯಾದಿ ಸಮಸ್ಯೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ, ಬೆಂಗಳೂರಿನ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಮಾದರಿಯಲ್ಲಿ ವೆನ್ಲಾಕ್ ಆಸ್ಪತ್ರೆಯನ್ನೂ ಮೇಲ್ದರ್ಜೆಗೆ ಏರಿಸುವ ಆವಶ್ಯಕತೆ ಇದೆ ಎಂದರು.

ಶಿಕ್ಷಕಿಯರಿಲ್ಲದೆ ವಿದ್ಯಾರ್ಥಿನಿಯರು ಚಿಕಿತ್ಸೆಗೆ: ನಗರದ ಕೋಡಿಯಾಲ್‌ಬೈಲ್‌ನ ಖಾಸಗಿ ಶಿಕ್ಷಣ ಸಂಸ್ಥೆಯೊಂದರ 15 ವಿದ್ಯಾರ್ಥಿನಿಯರು ಶಿಕ್ಷಕಿಯರಿಲ್ಲದೆ ಚಿಕಿತ್ಸೆಗೆ ಹಾಜರಾದ ಬಗ್ಗೆ ನ್ಯಾ. ವಿಶ್ವನಾಥ್ ಗರಂ ಆದರು. ಈ ವಿದ್ಯಾರ್ಥಿನಿಯರು ಶೀತಜ್ವರ ಮತ್ತಿತ್ಯಾದಿ ಸಣ್ಣಪುಟ್ಟ ಖಾಯಿಲೆಗಾಗಿ ಚಿಕಿತ್ಸೆಗೆ ಆಗಮಿಸಿದ್ದರು. ಆದರೆ, ಯಾವೊಬ್ಬ ಶಿಕ್ಷಕಿಯರು ಇರಲಿಲ್ಲ. ಇದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಲೋಕಾಯುಕ್ತರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನೋಟಿಸ್ ಜಾರಿಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಇದನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ. ತಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದಿದ್ದಾರೆ.

ಅನುದಾನ ಸಾಕಾಗದು: ವೆನ್ಲಾಕ್ ಮತ್ತು ಲೇಡಿಗೋಶನ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇಲ್ಲ. ಆದರೆ, ವೈದ್ಯಕಿಯೇತರ ಸಿಬ್ಬಂದಿಗಳ ಕೊರತೆ ಇದೆ. ಅಲ್ಲದೆ, ಅನುದಾನ ಕೂಡಾ ಸಾಕಾಗುವುದಿಲ್ಲ ಎಂದು ವೈದ್ಯಾಧಿಕಾರಿಗಳು ಲೋಕಾಯುಕ್ತರ ಗಮನ ಸೆಳೆದರು.

ಈ ಸಂದರ್ಭ ಡಿಎಚ್‌ಒ ರಾಮಕೃಷ್ಣರಾವ್, ಡಿಎಂಒ ರಾಜೇಶ್ವರಿ ದೇವಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X