Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಡೆನುಡಿ ಸಿದ್ಧಾಂತ

ನಡೆನುಡಿ ಸಿದ್ಧಾಂತ

ವಾರ್ತಾಭಾರತಿವಾರ್ತಾಭಾರತಿ23 Jun 2018 12:01 AM IST
share
ನಡೆನುಡಿ ಸಿದ್ಧಾಂತ

ನಡೆನುಡಿ ಸಿದ್ಧಾಂತವಾದಲ್ಲಿ ಕುಲ ಹೊಲೆ ಸೂತಕವಿಲ್ಲ.

ನುಡಿ ಲೇಸು ನಡೆಯಧಮವಾದಲ್ಲಿ,
ಅದು ಬಿಡುಗಡೆಯಿಲ್ಲದ ಹೊಲೆ.
ಕಳವು ಪಾರದ್ವಾರಂಗಳಲ್ಲಿ ಹೊಲಬನರಿಯದೆ,
ಕೆಟ್ಟು ನಡೆವುತ್ತ, ಮತ್ತೆ ಕುಲಜರೆಂಬ ಒಡಲವರುಂಟೆ?
ಆಚಾರವೆ ಕುಲ, ಅನಾಚರವೆ ಹೊಲೆ.
ಇಂತೀ ಉಭಯವ ತಿಳಿದರಿಯಬೇಕು.
ಕೈಯುಳಿಕತ್ತಿ ಅಡಿಗೂಂಟಕ್ಕೆ ಅಡಿಯಾಗಬೇಡ,
ಅರಿ ನಿಜಾತ್ಮಾರಾಮನಾ
                                 -ಮಾದಾರ ಚೆನ್ನಯ್ಯ

 ಮೂಲತಃ ಚೋಳದೇಶದ ಮಾದಾರ ಚೆನ್ನಯ್ಯನವರು ಕರಿಕಾಲ ಚೋಳರಾಜನ ಕುದುರೆಗಳಿಗೆ ಹುಲ್ಲು ಹಾಕುವ ಕಾಯಕ ಮಾಡುತ್ತಿದ್ದರು. ಬಸವಣ್ಣನವರ ಮಹಿಮೆಯನ್ನು ಅರಿತು ಕಲ್ಯಾಣಕ್ಕೆ ಬಂದು ಪಾದರಕ್ಷೆ ತಯಾರಿಸುವ ತಮ್ಮ ಮನೆತನದ ಕಾಯಕವನ್ನು ಆರಂಭಿಸಿದರು. ‘ಕೈಯುಳಿಕತ್ತಿ ಅಡಿಗೂಂಟಕ್ಕೆ ಅಡಿಯಾಗಬೇಡ ಅರಿ ನಿಜಾತ್ಮಾರಾಮನಾ.’ ಎಂದು ತಮ್ಮ ಕಾಯಕಕ್ಕೆ ಸಂಬಂಧಿಸಿದ ವಸ್ತುಗಳೊಂದಿಗೆ ವಚನಾಂಕಿತವನ್ನು ರೂಪಿಸಿದ್ದು ಇವರ ವೈಶಿಷ್ಟ್ಯ. ನಾವು ಕಾಯಕನಿಷ್ಠೆಯನ್ನು ಹೊಂದಬೇಕು. ಆದರೆ ಅಷ್ಟಕ್ಕೇ ತೃಪ್ತರಾಗದೆ, ಆ ಕಾಯಕದ ಮೂಲಕ ನಮ್ಮೆಳಗಿರುವ ನಿಜವಾದ ಆತ್ಮಾರಾಮನನ್ನು ಅರಿಯಬೇಕು ಎಂಬುದು ಮಾದಾರ ಚೆನ್ನಯ್ಯನವರ ಆಶಯವಾಗಿದೆ.
 ನಮ್ಮ ನಡೆ ಮತ್ತು ನುಡಿಯಲ್ಲಿ ವ್ಯತ್ಯಾಸವಾದರೆ ಆತ್ಮವಂಚಕರಾಗುವೆವು. ನಮ್ಮ ನಡೆನುಡಿಗಳೇ ನಮ್ಮ ಸಿದ್ಧಾಂತವಾಗಬೇಕು. ಅಂದರೆ ನಮ್ಮ ನಡೆ ಮತ್ತು ನುಡಿಯಲ್ಲಿ ಯಾವುದೇ ವ್ಯತ್ಯಾಸವಿರಬಾರದು. ಹೀಗೆ ಬದುಕುವವರೇ ಕುಲಜರು. ಅಂದರೆ ಅವರು ಯಾವುದೇ ಕುಲದವರಿದ್ದರೂ ಕುಲಸೂತಕವಿರುವುದಿಲ್ಲ. ಹೊಲೆ ಸೂತಕವಿರುವುದಿಲ್ಲ. ಒಳ್ಳೆಯ ಮಾತುಗಳನ್ನಾಡುತ್ತ ಕೆಟ್ಟ ನಡವಳಿಕೆ ಇದ್ದರೆ ಅದು ಮುಕ್ತಿ ಕಾಣದ ಹೊಲೆಬದುಕು. ಕಳ್ಳತನ, ವ್ಯಭಿಚಾರ ಮುಂತಾಗಿ ದಾರಿತಪ್ಪಿಹಾಳಾಗಿ ಹೋಗುವವರು ಕುಲೋತ್ತಮರು ಎಂದು ಹೇಳಲು ಸಾಧ್ಯವೇ? ಎಂದು ಚೆನ್ನಯ್ಯನವರು ಪ್ರಶ್ನಿಸುತ್ತಾರೆ. ‘ಸದಾಚಾರವೇ ಕುಲ; ಅನಾಚಾರವೇ ಹೊಲೆ’ ಎಂದು ವ್ಯಾಖ್ಯಾನಿಸುತ್ತಾರೆ. ಈ ಸರಿ ತಪುಗಳ ಬಗ್ಗೆ ಪರಿಜ್ಞಾನವಿರಬೇಕು. ಅಂದಾಗ ಮಾತ್ರ ನಮ್ಮೆಳಗಿನ ಘನವನ್ನು ತಿಳಿದುಕೊಂಡು ಘನಮನದವರಾಗಲು ಸಾಧ್ಯ ಎಂದು ತಿಳಿಸುತ್ತಾರೆ.
 ಬಸವಣ್ಣನವರು ಮಾದಾರ ಚೆನ್ನಯ್ಯನವರನ್ನು ತಮ್ಮ ವಚನಗಳಲ್ಲಿ ಪದೇಪದೇ ಸ್ಮರಿಸುತ್ತಾರೆ. ‘ಮಾದಾರ ಚೆನ್ನಯ್ಯನ ಮನೆಯ ಮಗ ನಾನು’ ಎಂದು ಹೆಮ್ಮೆಯಿಂದ ಹೇಳುತ್ತಾರೆ. ‘ಕುಲಕ್ಕೆ ತಿಲಕ ನಮ್ಮ ಮಾದಾರ ಚೆನ್ನಯ್ಯ ನಿಮ್ಮಿಂದಧಿಕ ನೋಡಾ ಕೂಡಲಸಂಗಮದೇವಾ’ ಎಂದು ಅವರನ್ನು ದೇವರಿಗಿಂತಲೂ ಮೇಲ್ಮಟ್ಟದಲ್ಲಿಟ್ಟು ನೋಡುತ್ತಾರೆ. ವರ್ಣ, ಜಾತಿ ಮತ್ತು ಅಸ್ಪಶ್ಯತೆಯಿಂದ ಕೂಡಿದ ಶ್ರೇಣೀಕೃತ ಸಮಾಜದಲ್ಲಿ ಕಟ್ಟಕಡೆಯ ಜಾತಿಗೆ ಸೇರಿದ ಮಾದಾರ ಚೆನ್ನಯ್ಯನವರು ತಮ್ಮ ಸಾತ್ವಿಕ ಬದುಕಿನಿಂದಾಗಿ ಕಾಯಕ, ಪ್ರಸಾದ ಮತ್ತು ದಾಸೋಹ ಪ್ರಜ್ಞೆಯಿಂದ ಕೂಡಿದ ಬಸವ ಸಮಾಜದಲ್ಲಿ ವ್ಯಕ್ತಿತ್ವ ವಿಕಸನಗೊಂಡು ಅತ್ಯುನ್ನತ ಮಟ್ಟ ತಲುಪಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X