ಮುಂಡಗೋಡ: ಬೈಕ್ ಢಿಕ್ಕಿಯಾಗಿ ಪಾದಚಾರಿ ಗಂಭೀರ

ಮುಂಡಗೋಡ,ಜೂ.24: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಕರಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ
ಗಂಭೀರವಾಗಿ ಗಾಯಗೊಂಡ ಪಾದಚಾರಿಯನ್ನು ಕರಗಿನಕೊಪ್ಪ ಗ್ರಾಮದ ನಾರಾಯಣ ಲಮಾಣಿ ಎಂದು ತಿಳಿದು ಬಂದಿದೆ..
ಶಿರಸಿ ಕಡೆಯಿಂದ ಬರುತ್ತಿದ್ದ ಬೈಕ್, ಮನೆಗೆ ತೆರಳುತ್ತಿದ್ದ ಪಾದಚಾರಿಗೆ ಢಿಕ್ಕಿ ಹೊಡೆದಿದ್ದಾನೆ. ತಕ್ಷಣ ಗಾಯಾಳುನನ್ನು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ
Next Story





