ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ
ಶ್ರೀನಗರ, ಜೂ. 24: ಭದ್ರತಾ ಪಡೆ ದಕ್ಷಿಣ ಕಾಶ್ಮೀರದ ಕುಲ್ಗಾಂವ್‌ನಲ್ಲಿ ರವಿವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಓರ್ವ ಶರಣಾಗತನಾಗಿದ್ದಾನೆ. ಕುಲ್ಗಾಂವ್‌ನ ಚಡ್ಡೇರ್‌ಭಾನ್ ಗ್ರಾಮದಲ್ಲಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ ಬಳಿಕ ಗುಂಡಿನ ಚಕಮಕಿ ಆರಂಭವಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಓರ್ವ ಶರಣಾಗತನಾಗಿದ್ದೇನೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಶೇಶ್ ಪೌಲ್ ಟ್ವೀಟ್ ಮಾಡಿದ್ದಾರೆ. ಹತರಾದ ಉಗ್ರರಲ್ಲಿ ಓರ್ವನನ್ನು ಶಕುರ್ ದಾರ್ ಎಂದು ಗುರುತಿಸಲಾಗಿದ್ದು, ಈತ ಲಷ್ಕರೆ ತಯ್ಯಿಬದ ವಿಭಾಗೀಯ ಕಮಾಂಡರ್ ಎಂದು ಅವರು ಹೇಳಿದ್ದಾರೆ. ಈ ಸಂದರ್ಭ ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಯುವಕರು ಕಲ್ಲು ತೂರಾಟ ನಡೆಸಿದರು. ಅವರನ್ನು ನಿಗ್ರಹಿಸಲು ಭದ್ರತಾ ಪಡೆ ಅಶ್ರುವಾಯು ಸೆಲ್‌ಗಳನ್ನು ಸಿಡಿಸಿತು ಎಂದು ಸ್ಥಳೀಯರು ತಿಳಿಸಿದ್ದಾರೆ.
Next Story





