Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 28ರಿಂದ ಬೆಂಗಳೂರಿನಲ್ಲಿ ಹೊರಗುತ್ತಿಗೆ...

28ರಿಂದ ಬೆಂಗಳೂರಿನಲ್ಲಿ ಹೊರಗುತ್ತಿಗೆ ನೌಕರರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ25 Jun 2018 8:36 PM IST
share
28ರಿಂದ ಬೆಂಗಳೂರಿನಲ್ಲಿ ಹೊರಗುತ್ತಿಗೆ ನೌಕರರಿಂದ ಧರಣಿ

ಕುಂದಾಪುರ, ಜೂ.25: ಸರಕಾರದ ನೇರ ನೇಮಕಾತಿ ಕ್ರಮದಿಂದ ಕೆಲಸ ಕಳೆದುಕೊಳ್ಳುವ ಆತಂಕಕ್ಕೆ ಒಳಗಾಗಿರುವ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ‘ಡಿ’ ವರ್ಗದ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಇಲಾಖೆಯಿಂದಲೇ ವೇತನ ಪಾವತಿ, ಏಕರೂಪದ ಸೇವಾ ನಿಯಮಾವಳಿ ಹಾಗೂ ಕಾರ್ಮಿಕ ಕಾನೂನುಗಳ ಜಾರಿಗೆ ಒತ್ತಾಯಿಸಿ ಜೂ.28ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸಲಿರುವ ಅನಿರ್ಧಿಷ್ಠಾವಧಿ ಧರಣಿ ಮುಷ್ಕರವನ್ನು ಯಶಸ್ವಿಗೊಳಿಸಬೇಕುಎಂದು ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ನಿತ್ಯಾನಂದ ಸ್ವಾಮಿ ಹಾಸ್ಟೆಲ್ ಹೊರುತ್ತಿಗೆ ನೌಕರರಿಗೆ ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ರವಿವಾರ ಕುಂದಾಪುರ ಕಾರ್ಮಿಕ ಭವನದಲ್ಲಿ ನಡೆದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅರು ಮಾತನಾಡುತಿದ್ದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುತ್ತಿರುವ ವಸತಿ ಶಾಲೆ, ಕಾಲೇಜುಗಳಲ್ಲಿ ಕಳೆದ ಹತ್ತಾರು ವರ್ಷಗಳಿಂದ ಅಡುಗೆ, ಸ್ವಚ್ಚತೆ, ಕಾವಲು ಕಾಯುವುದು ಮುಂತಾದ ಕೆಲಸಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಮಾಡುತ್ತಾ ಬಂದಿರುವ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿರುವ ಹೊರಗುತ್ತಿಗೆ ನೌಕರರ ಸೇವೆಯನ್ನು ಖಾಯಂ ಮಾಡಿ ಗುತ್ತಿಗೆದಾರರ ಶೋಷಣೆಯಿಂದ ಬಿಡುಗಡೆ ಮಾಡಬೇಕೆಂದು ಸರಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸಮಾವೇಶದಲ್ಲಿ ಮಂಡಿಸಿ, ಮುಂದಿನ ಹೋರಾಟಕ್ಕೆ ಅಣಿಯಾಗಲು ಸವಾರ್ನುಮತದಿಂದ ತೀರ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಪ್ರಾಸ್ತಾವಿಕವಾಗಿ ಮಾತನಾಡಿ ಬೆಂಗಳೂರು ಚಲೋ ಹೋರಾಟವನ್ನು ುಶಸ್ವಿಗೊಳಿಸಬೇಕೆಂದು ಹೇಳಿದರು.

ಸಂಘಟನೆ ಜಿಲ್ಲಾಧ್ಯಕ್ಷ ಮಂಜುನಾಥ ಮಯ್ಯಡಿ ಬೈಂದೂರು ಸಮಾವೇಶ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಗಜಾನನ ಉಡುಪಿ, ಪ್ರೇಮಾ ಕುಂದಾಪುರ, ಉಯ ಕುಂದಾಪುರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X