ಜು.18ರಿಂದ ಸಂಸತ್ತಿನ ಮುಂಗಾರು ಅಧಿವೇಶನ

ಹೊಸದಿಲ್ಲಿ,ಜೂ.25: ಸಂಸತ್ತಿನ ಮುಂಗಾರು ಅಧಿವೇಶನವು ಜು.18ರಂದು ಆರಂಭಗೊಂಡು ಆ.10ಕ್ಕೆ ಅಂತ್ಯಗೊಳ್ಳಲಿದೆ.
ಸೋಮವಾರ ಇಲ್ಲಿ ಗೃಹಸಚಿವ ರಾಜನಾಥ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಸದೀಯ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಈ ಶಿಫಾರಸನ್ನು ಮಾಡಲಾಗಿದೆ. ಸಮಿತಿಯ ಶಿಫಾರಸಿಗೆ ಅನುಗುಣವಾಗಿ ರಾಷ್ಟ್ರಪತಿಗಳು ಅಧಿವೇಶನದ ಆರಂಭವನ್ನು ಔಪಚಾರಿಕವಾಗಿ ಪ್ರಕಟಿಸಲಿದ್ದಾರೆ.
ಅಧಿವೇಶನದಲ್ಲಿ ಸುಮಾರು 18 ಬೈಠಕ್‌ಗಳು ಇರುತ್ತವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ಅವರು ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
Next Story





