ಬೋಟಿಂಗ್ ವ್ಯವಸ್ಥೆಗೆ ಸಿಪಿಎಂ ಆಗ್ರಹ
ಮಂಗಳೂರು, ಜೂ.25: ಮೂಲರಪಟ್ಣ ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಹಾಗಾಗಿ ಜಿಲ್ಲಾಡಳಿತವು ತುರ್ತಾಗಿ ಬೋಟಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಆಗ್ರಹಿಸಿದ್ದಾರೆ.
ಅಕ್ರಮ ಮರಳುಗಾರಿಕೆಯೇ ಸೇತುವೆ ಕುಸಿತಕ್ಕೆ ಕಾರಣವಾಗಿದೆ. ಹಾಗಾಗಿ ಜಿಲ್ಲಾಡಳಿತವು ಇದನ್ನು ಗಂಭೀರವಾಗಿ ಪರಿಗಣಿಸಿ ಅಕ್ರಮ ಮರಳುಗಾರಿಕೆಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
Next Story





