ಭಿಕ್ಷಾಟನೆ ಕುರಿತು ಅರಿವು ಮೂಡಿಸಲು ಮನವಿ

ಉಡುಪಿ, ಜೂ.25: ನಗರದ ಸರಕಾರಿ ಶಾಲೆಗಳ ಮಕ್ಕಳನ್ನು ಭಿಕ್ಷಾಟನೆ ಯಿಂದು ಮುಕ್ತಗೊಳಿಸುವ ನಿಟ್ಟಿನಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿ ಕೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಸೋಮವಾರ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಭಿಕ್ಷಾಟನೆ ಒಂದು ಪಿಡುಗು. ಉಡುಪಿ ನಗರದ ವಿವಿಧ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಲಸೆ ಕಾರ್ಮಿಕರ ಮಕ್ಕಳು ರಜಾ ದಿನಗಳಲ್ಲಿ ಹಾಗೂ ಗೈರು ಹಾಜರಾಗಿ ನಗರದ ಸರಕಾರಿ ಬಸ್ ನಿಲ್ದಾಣ, ಸರ್ವಿಸ್, ಸಿಟಿ ಬಸ್ ನಿಲ್ದಾಣಗಳಲ್ಲಿ ಭಿಕ್ಷೆ ಬೇಡುತ್ತಿರುವುದು ಕಂಡು ಬರುತ್ತಿದೆ. ಈ ಬಗ್ಗೆ ಉಡುಪಿ ವಲಯದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ, ಹೆತ್ತವರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಸಮಿತಿ ಮನವಿಯಲ್ಲಿ ಒತ್ತಾಯಿಸಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಬಿ.ಲೊಕೇಶಪ್ಪಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು, ಸದಸ್ಯ ತಾರಾನಾಥ್ ಮೇಸ್ತ ಶಿರೂರು ಉಪಸ್ಥಿತರಿದ್ದರು.
Next Story





