Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುನರ್ವಸತಿ ಕೇಂದ್ರಗಳ ಗಿರಿಜನರಿಗೆ ಅಗತ್ಯ...

ಪುನರ್ವಸತಿ ಕೇಂದ್ರಗಳ ಗಿರಿಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ ಸೂಚನೆ

ವಾರ್ತಾಭಾರತಿವಾರ್ತಾಭಾರತಿ25 Jun 2018 11:33 PM IST
share
ಪುನರ್ವಸತಿ ಕೇಂದ್ರಗಳ ಗಿರಿಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ ಸೂಚನೆ

ಮಡಿಕೇರಿ, ಜೂ.25: ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುತ್ತಿರುವ ಗಿರಿಜನ ಕುಟುಂಬಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಶೀಘ್ರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸವಿರುವ ಗಿರಿಜನರ ಕಟುಂಬಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ತಾತ್ಕಾಲಿಕ ಶೌಚಾಲಯಕ್ಕೆ ನಿರ್ಮಿಸಿರುವ ಪಿಟ್‍ಗುಂಡಿಗಳು ಮಳೆಯ ನೀರಿನಿಂದ ಬೇಗನೆ ತುಂಬುತ್ತಿದ್ದು, ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಮುಂಚೆಯೇ ಪ್ರತಿ 5 ದಿನಗಳಿಗೊಮ್ಮೆ ಗುಂಡಿಗಳನ್ನು ಸ್ವಚ್ಚಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಸವನಹಳ್ಳಿಯ 101 ಮತ್ತು ಬ್ಯಾಡಗೊಟ್ಟದ 99 ಮನೆಗಳ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಅವುಗಳನ್ನು ಒಂದು ತಿಂಗಳ ಅವಧಿಯೊಳಗೆ ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು. ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುವ ಕುಟುಂಬಗಳಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜಿ.ಪಂ.ಸಿಇಒ ಪ್ರಶಾಂತಕುಮಾರ್ ಮಿಶ್ರ ಮಾತನಾಡಿ, ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಸ್ವ ಉದ್ಯೋಗ ಪಡೆಯುವಂತಾಗಲು ಅಲ್ಲಿ ವಾಸಿಸುವ ಕಟುಂಬ ಸದಸ್ಯರ ಹೆಸರು ನೋಂದಾಯಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಪುನರ್ವಸತಿ ಕೇಂದ್ರಗಳ ಮೂಲ ಸೌಕರ್ಯಕ್ಕೆ ಸಂಬಂಧಿಸಿದಂತೆ ಉಪ ವಿಭಾಗಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚೀನ್ ಹಲವು ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಪುಟ್ಟಸ್ವಾಮಿ, ಸೆಸ್ಕ್ ಎಂಜಿನಿಯರ್ ಸೋಮಶೇಖರ್, ಕುಶಾಲನಗರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X