ವಿದ್ಯಾರ್ಥಿ ಸಾವಿನ ತನಿಖೆಗೆ ಪೂರ್ಣ ಸಹಕಾರ: ಕೂಡಿಗೆ ಸೈನಿಕ ಶಾಲೆ ಪ್ರಾಂಶುಪಾಲ
ಮಡಿಕೇರಿ ಜೂ.25: ಕೂಡಿಗೆ ಸೈನಿಕ ಶಾಲೆಯ ವಿದ್ಯಾರ್ಥಿ ಕೆಡೆಟ್ ಚಿಂಗಪ್ಪನವರ ಸಾವಿನ ತನಿಖೆಗೆ ಪೂರ್ಣ ಸಹಕಾರ ನೀಡುತ್ತಿರುವುದಾಗಿ ಶಾಲಾ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ಆರ್. ಆರ್. ಲಾಲ್ ಸ್ಪಷ್ಟಪಡಿಸಿದ್ದಾರೆ.
ಸೈನಿಕ ಶಾಲೆಯಲ್ಲಿ ಸೋಮವಾರ ಅಗಲಿದ ಕೆಡೆಟ್ ಚಿಂಗಪ್ಪನಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಾಂಶುಪಾಲರು, ವಿದ್ಯಾರ್ಥಿಯ ಸಾವಿಗೆ ಅತೀವ ದುಃಖ ವ್ಯಕ್ತಪಡಿಸಿ, ವಿದ್ಯಾರ್ಥಿಯ ಕುಟಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭ ಶಾಲೆಯ ಉಪಪ್ರಾಂಶುಪಾಲರಾದ ಲೆಫ್ಟಿನೆಂಟ್ ಕರ್ನಲ್ ಸೀಮಾ ತ್ರಿಪಾಠಿ, ಆಡಳಿತಾಧಿಕಾರಿಗಳಾದ ಸ್ಕ್ವಾಡ್ರನ್ ಲೀಡರ್ ಡಿ. ಮ್ಯಾಥ್ಯು, ಬೋಧಕ, ಬೋಧಕೇತರ ಸಿಬ್ಬಂಧಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡು ಅಗಲಿದ ವಿದ್ಯಾರ್ಥಿಯ ಆತ್ಮಕ್ಕೆ ಶಾಂತಿಯನ್ನು ಕೋರಿ ವಿಶೇಷ ಪ್ರಾರ್ಥನೆ ಮಾಡಿದರು.
Next Story