Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ

ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ

ವಾರ್ತಾಭಾರತಿವಾರ್ತಾಭಾರತಿ26 Jun 2018 12:05 AM IST
share
ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ

ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ?
ಕಡೆ ನಡುವೆಂದೇನೊ ಮೃಡನ ಹಾಡುವಂಗೆ?
ಕುಲಛಲವೆಂದೇನೊ ಮನದ ಹೊಲೆಯ ಕಳೆದವಂಗೆ?
ತಲೆಕಾಲೆಂದೇನೊ ಮಾಯೆಯ ಬಲೆಯ ನುಸುಳಿದವಂಗೆ?
ಕಲಿಯುಗದ ಕತ್ತಲೆಯ ದಾಂಟಿದವಂಗೆ, ನಿಮ್ಮ ನೆಲೆಯನರಿದ ಶರಣಂಗೆ
ಇನ್ನು ಸ್ಥಳನೆಲೆ ಆವುದುಂಟು ಹೇಳಾ,
ಬಸವಪ್ರಿಯ ಕೂಡಲಚೆನ್ನಬಸವಣ್ಣಾ?
                                     -ಹಡಪದ ಅಪ್ಪಣ್ಣ

 ‘ಕುರುಡನ ಕೈಯ ಕನ್ನಡಿ ಇದ್ದ ಹಾಗೆ’ ಮತ್ತು ‘ಕನ್ನಡಿಗೆ ಕನ್ನಡಿ ತೋರಿದಂತಿಪ್ಪರು’ ಎಂದು ಹಡಪದ ಅಪ್ಪಣ್ಣನವರು ಬೇರೆ ವಚನಗಳಲ್ಲಿ ಹೇಳಿದ್ದನ್ನು ಬಿಟ್ಟರೆ ಕ್ಷೌರಿಕರ ವೃತ್ತಿಪರಿಭಾಷೆಯನ್ನು ಎಲ್ಲೂ ಬಳಸಿಲ್ಲ. ಅವರು ಸಂಚಿಯ ಕಾಯಕ ಮಾಡುತ್ತಿದ್ದಿರಬಹುದು ಎಂಬ ಸಂಶಯವನ್ನು ಕೆಲ ವಿದ್ವಾಂಸರು ವ್ಯಕ್ತಪಡಿಸಿದ್ದಾರೆ. ಆದರೆ ಅವರು ಸಂಚಿಯ ಕಾಯಕದ ಪರಿಭಾಷೆಯನ್ನೂ ಬಳಸಿಲ್ಲ. ಹಡಪ ಎಂದರೆ ‘ಅಡಿಕೆ ಎಲೆಯ ಚೀಲ’ (ಸಂಚಿ), ‘ಕ್ಷೌರಿಕನ ಸಲಕರಣೆಯ ಚೀಲ’ ಎಂದು ಮುಂತಾದ ಅರ್ಥಗಳಿವೆ. ತನ್ನ ಒಡೆಯನಿಗೆ ಅಡಿಕೆ ಎಲೆಯ ಚೀಲವನ್ನು ಹಿಡಿದು ಸೇವೆ ಮಾಡುವವನಿಗೆ ಹಡಪಾಳಿ ಅಥವಾ ಹಡಪಿಗ ಎನ್ನುತ್ತಾರೆ. ಕ್ಷೌರ ಮಾಡುವ ಕಾಯಕ ಜೀವಿಗಳಿಗೆ ‘ಹಡಪದ ಸಮಾಜದವರು’ ಎಂದು ಕರೆಯುವುದು ವಾಡಿಕೆಯಾಗಿದೆ. ಕಾಯಕಜೀವಿಗಳು ತಮ್ಮ ಕಾಯಕದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಸಹಜವಾಗಿದೆ. ಅನುಭಾವಿ ಹಡಪದ ಅಪ್ಪಣ್ಣನವರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಂತೆ ಇದ್ದವರು. ಕೊನೆಯಲ್ಲಿ ಬಸವಣ್ಣನವರು ಕಲ್ಯಾಣ ತೊರೆದು ಕೂಡಲಸಂಗಮಕ್ಕೆ ಬಂದಾಗ ಅವರ ಜೊತೆಯಲ್ಲೇ ಬಂದವರು.
ಅಡಿ (ಹೆಜ್ಜೆ) ಎಂಬುದಕ್ಕೆ ರಹಸ್ಯ ಎಂಬ ಅರ್ಥವೂ ಇದೆ. ದೇವರ ಅಡಿಗಳನ್ನು ಅರಿತವನೆಂದರೆ ದೈವೀ ರಹಸ್ಯವನ್ನು ಬಲ್ಲವನು ಎಂದರ್ಥ. ದೇವರು ಸಕಲ ಜೀವಿಗಳ ಮತ್ತು ಸಕಲ ವಸ್ತುಗಳ ಮೂಲ ಎಂಬ ಸತ್ಯವನ್ನು ತಿಳಿದುಕೊಳ್ಳುವುದೇ ಅರಿವು. ಇಂಥ ಅರಿವು ಉಂಟಾದಾಗ ಎಡ ಬಲಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಮತ್ತು ಪಂಚಮ ವರ್ಣಗಳಿಗೆ ಅರ್ಥವಿರುವುದಿಲ್ಲ. ಶಿವನನ್ನು ಹಾಡಿ ಹೊಗಳುವವನಿಗೆ ‘ಅವರು ಕಡೆಯಲ್ಲಿ ಇರುವವರು, ಇವರು ನಡುವಿನವರು’ ಎಂಬ ಭೇದಭಾವ ಇರುವುದಿಲ್ಲ. ಯಾರ ಮನಸ್ಸಿನಲ್ಲಿ ಹೊಲೆ ಎಂಬುದು ಹುಟ್ಟುವುದೋ ಅವರು ಕುಲ, ಛಲ ಎಂಬ ಅಹಂಕಾರದಿಂದ ಬದುಕುತ್ತಿರುತ್ತಾರೆ. ಮನದ ಹೊಲೆಯನ್ನು ಕಳೆದುಕೊಂಡವರು ಕುಲ ಮತ್ತು ಛಲ ಪ್ರಜ್ಞೆಯಿಂದ ಹೊರಗೆ ಬಂದು ಸರ್ವಜೀವಪ್ರಿಯ ಆಗಿರುತ್ತಾರೆ. ಮಾಯೆಯ ಬಲೆಯನ್ನು ಹರಿದವರಿಗೆ ಅಪಾದಮಸ್ತಕ ಒಂದೇ ಆಗಿರುತ್ತದೆ. ಪಾದದಲ್ಲಿ ಶೂದ್ರ ಹುಟ್ಟಿದ, ತಲೆಯಲ್ಲಿ ಬ್ರಾಹ್ಮಣ ಹುಟ್ಟಿದ ಎಂಬ ಭ್ರಮೆಯಿಂದ ಹೊರಗೆ ಬರುವುದೇ ಜ್ಞಾನ. ಕಲಿಯುಗದ ಅಜ್ಞಾನವನ್ನು ದಾಟಿ, ದೇವರ ಮೂಲವನ್ನು ಅರಿತ ಶರಣ ಯಾವುದೇ ಒಂದು ನಿರ್ದಿಷ್ಟ ಸ್ಥಳಕ್ಕೆ ಸೀಮಿತವಾಗದೆ ವಿಶ್ವಮಾನವನಾಗಿರುತ್ತಾನೆ ಎಂದು ಹಡಪದ ಅಪ್ಪಣ್ಣನವರು ಮನೋಜ್ಞವಾಗಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X