ವಿಕಲಚೇತನರಿಗೆ ದ್ವಿಚಕ್ರ ವಾಹನಕ್ಕೆ ಅರ್ಜಿ ಆಹ್ವಾನ
ಉಡುಪಿ, ಜೂ.26: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2018-19ನೇ ಸಾಲಿನಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕಾಗಿ ಶೇ.75ಕ್ಕಿಂತ ಹೆಚ್ಚಿನ ಪ್ರಮಾಣದ ತೀವ್ರತರನಾದ ಅಂಗವೈಕಲ್ಯಹೊಂದಿರುವ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನಿಷ್ಟ 20ರಿಂದ ಗರಿಷ್ಟ 60 ವರ್ಷ ದಾಟದ ವಿಕಲಚೇತರು ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಎರಡು ಲಕ್ಷ ರೂ.ಒಳಗಿನ ಆದಾಯ ಪ್ರಮಾಣ ಪತ್ರಗಳನ್ನು ಕಳುಹಿಸಬೇಕು.
ಕನಿಷ್ಟ 20ರಿಂದ ಗರಿಷ್ಟ 60 ವರ್ಷ ದಾಟದ ವಿಕಲಚೇತರು ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಎರಡು ಲಕ್ಷ ರೂ.ಒಳಗಿನ ಆದಾಯ ಪ್ರಮಾಣ ಪತ್ರಗಳನ್ನು ಕಳುಹಿಸಬೇಕು. ಆಸಕ್ತರು ಇಲಾಖೆ ವೆಬ್ಸೈಟ್ www.welfareofdisabled.kar.nic.in ಮುಖಾಂತರ ದಾಖಲೆಗಳೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಮುದ್ರಿತ ಅರ್ಜಿ ಹಾಗೂ ದಾಖಲಾತಿಗಳ ಹಾರ್ಡ್ ಪ್ರತಿಯನ್ನು ಜುಲೈ 5ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574810 /2574811ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.