ಬೆಂಗಳೂರು: ಬೈಕ್ ಢಿಕ್ಕಿಯಾಗಿ ಪಾದಚಾರಿ ಮೃತ್ಯು

ಬೆಂಗಳೂರು, ಜೂ.27: ಮಹದೇವಪುರದ ಕಾವೇರಿ ನಗರದ ಬಳಿ ಮಂಗಳವಾರ ಸಂಜೆ ರಸ್ತೆ ದಾಟುತ್ತಿದ್ದ ರಾಮಕೃಷ್ಣ (50) ಎಂಬುವರು ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.
ಕಾವೇರಿ ನಗರದ ನಿವಾಸಿ ರಾಮಕೃಷ್ಣ ಅವರು ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಿಸಿರುವ ಕೆಆರ್ ಪುರಂ ಸಂಚಾರ ಪೊಲೀಸರು ಪರಾರಿಯಾಗಿರುವ ಬೈಕ್ ಚಾಲಕನಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
Next Story





