ಪುತ್ತೂರು : ಪತ್ನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ; ಪತಿಯ ಬಂಧನ
ಪುತ್ತೂರು, ಜೂ. 27: ಪತಿಯೊಬ್ಬ ತನ್ನ ಪತ್ನಿಗೆ ಹಲ್ಲೆ ನಡೆಸಿ, ಮಾನಸಿಕ ಹಿಂಸೆ ನೀಡಿ ಜೀವಬೆದರಿಕೆಯೊಡ್ಡಿದ ಪ್ರಕರಣವೊಂದು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಬೈಲಿಕಲ್ಲು ಎಂಬಲ್ಲಿ ನಡೆದಿದೆ. ಆರೋಪಿ ಪತಿಯನ್ನು ಸಂಪ್ಯ ಪೊಲೀಸರು ಬಂಧಿಸಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅರಿಯಡ್ಕ ಗ್ರಾಮದ ಬೈಲಿಕಲ್ಲು ನಿವಾಸಿ ಸುಲತ ಎಂಬವರು ತನ್ನ ಪತಿ ಜಗದೀಶ್ ನಾಯ್ಕ (38) ಎಂಬವರ ವಿರುದ್ಧ ಸಂಪ್ಯ ಠಾಣೆಗೆ ದೂರು ನೀಡಿದ್ದಾರೆ.
ಮದ್ಯ ವ್ಯಸನಿಯಾಗಿರುವ ಜಗದೀಶ್ ನಾಯ್ಕ ಅವರು ಪಾನಮತ್ತರಾಗಿ ಬಂದು ದಿನನಿತ್ಯ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದರು. ರವಿವಾರ ಅವರು ತನ್ನ ಮೇಲೆ ಹಲ್ಲೆ ನಡೆಸಿ, ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ಸುಲತ ಅವರು ಸಂಪ್ಯ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಜಗದೀಶ್ ನಾಯ್ಕ ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Next Story





