ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಬ್ರಹ್ಮಾವರ, ಜೂ.27: ಚೇರ್ಕಾಡಿ ಗ್ರಾಮದ ಜಾರಜೆಡ್ಡು ನಿವಾಸಿ ರತ್ನಾ ಬಾಯಿ(70) ಎಂಬವರು ಮಾನಸಿಕ ಒತ್ತಡದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಜೂ.27ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ: ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮುಹಮ್ಮದ್ ರಫೀಕ್ (58) ಎಂಬವರು ಜೂ.26ರಂದು ರಾತ್ರಿ ವೇಳೆ ಕೋಡಿ ಬೇಂಗ್ರೆ ಸ್ವರ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಮೃತ ದೇಹವು ಜೂ.27ರಂದು ಬೆಳಗ್ಗೆ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮಾಸೆಬೈಲು: ವಿಪರೀತ ಕುಡಿಯುವ ಚಟ ಹೊಂದಿದ್ದ ಮಡಾಮಕ್ಕಿಯ ತೆಂಕುಬೆಪ್ಡಿ ನಿವಾಸಿ ಸುಧಾಕರ ಕುಲಾಲ್ ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜೂ.26ರಂದು ಮಧ್ಯಾಹ್ನ ತನ್ನ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





