Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಕುವೆಂಪು ಕನ್ನಡ ಭವನದಲ್ಲಿ...

ದಾವಣಗೆರೆ: ಕುವೆಂಪು ಕನ್ನಡ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 Jun 2018 10:53 PM IST
share
ದಾವಣಗೆರೆ: ಕುವೆಂಪು ಕನ್ನಡ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ

ದಾವಣಗೆರೆ,ಜೂ.27: ಕೃಷಿ, ಕೆರೆ-ಕಟ್ಟೆಗಳು ಮತ್ತು ವಿವಿಧ ಮಾರುಕಟ್ಟೆಗಳಿಗೆ 480 ವರ್ಷಗಳ ಹಿಂದೆಯೇ ಕೆಂಪೇಗೌಡರು ಭೂಮಿ ಮೀಸಲಿಟ್ಟು ವ್ಯವಸ್ಥಿತವಾಗಿ ನಗರ ನಿರ್ಮಿಸಿರುವುದು ಆದರ್ಶನೀಯ ಎಂದು ಶಾಸಕ ಎಸ್.ಎ.ರವೀಂದ್ರನಾಥ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಾಲಿಕೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಕುವೆಂಪು ಕನ್ನಡ ಭವನದಲ್ಲಿ ಏರ್ಪಡಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 509ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದ ಕಾಲು ಭಾಗ ಜನರು ಬೆಂಗಳೂರು ನಗರದಲ್ಲಿ ವಾಸಿಸುತ್ತಿದ್ದಾರೆ. ಅಷ್ಟೊಂದು ಸುವ್ಯವಸ್ಥಿತವಾಗಿ ಕೆಂಪೇಗೌಡರು ನಗರವನ್ನು ಯೋಜಿಸಿ ನಿರ್ಮಿಸಿದ್ದಾರೆ. ಕೆರೆ-ಕಟ್ಟೆ, ದೇವಸ್ಥಾನ, ಮಾರುಕಟ್ಟೆಗೆ ಬೇಕಾದಷ್ಟು ಭೂಮಿ ಮೀಸಲಿಟ್ಟಿದ್ದರು. ಇಂದು ದಾವಣಗೆರೆ ಸೇರಿದಂತೆ ನಗರಗಳಲ್ಲಿ ಒತ್ತುವರಿ ಮಾಡುವ ಬುದ್ದಿಯೇ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಅವರ ಚಿಂತನೆ, ಪರಿಕಲ್ಪನೆಯನ್ನು ಜಾರಿಗೊಳಿಸಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದ ಅವರು ಸರ್ಕಾರ ಕೆಂಪೇಗೌಡರನ್ನು ಅಷ್ಟಾಗಿ ಗುರುತಿಸಿಲ್ಲ. ಮುಂದಿನ ದಿನಗಳಲ್ಲಿ ಈ ಕೆಲಸ ಆಗಲಿ ಎಂದು ಆಶಿಸಿದರು.

ಹೂವಿನಹೊಳೆ ಪ್ರತಿಷ್ಟಾನದ ಅಧ್ಯಕ್ಷ ನಂದಿ ಜೆ. ಹೂವಿನಹೊಳೆ ನಾಡಪ್ರಭು ಕೆಂಪೇಗೌಡ ಉಪನ್ಯಾಸ ನೀಡಿ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಕೊಡುಗೆ ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಅವರು ಬೆಂಗಳೂರು ನಗರವನ್ನು ಅತ್ಯಂತ ವ್ಯವಸ್ಥಿತವಾಗಿ ಎಲ್ಲ ವರ್ಗದವರ ಅನುಕೂಲಕ್ಕಾಗಿ ವಿವಿಧ ಪೇಟೆಗಳು, ಮಾರುಕಟ್ಟೆ, ಕೃಷಿಗಾಗಿ ಕೆರೆ-ಕಟ್ಟೆ ಸ್ಥಾಪಿಸುವ ಮೂಲಕ ಜಾತ್ಯಾತೀತ ನಾಯಕತ್ವ ಮೆರೆದಿದ್ದರು. ಸರ್ಕಾರವೂ ಇವರ ಕೆಲಸ-ಸಾಧನೆ ಬಗ್ಗೆ ಸಂಶೋಧಿಸಲು ಪ್ರಾಧಿಕಾರ ರಚಿಸಿದೆ ಹಾಗೂ ಕಳೆದ ಸಾಲಿನಿಂದ ಜಯಂತಿ ಆಚರಿಸುತ್ತಿರುವುದು ಸ್ವಾಗತಾರ್ಹ ಎಂದರು.

ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಮಾತನಾಡಿ, ಕೆಂಪೇಗೌಡರು ಜನ ಜೀವನ ವ್ಯವಸ್ಥೆಗೆ ಅಗತ್ಯವಾಗಿ ಬೇಕಾದಂತಹ ನೀರಿಗಾಗಿ ಕೆರೆಗಳನ್ನು ನಿರ್ಮಿಸಿದರು. ಸರ್ವ ವರ್ಗದ ಜನರ ಜೀವನ ವ್ಯವಸ್ಥೆಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥಿತವಾಗಿ ನಗರವನ್ನು ನಿರ್ಮಿಸಿದ್ದು ಇವರ ದೂರದೃಷ್ಟಿ, ಪರಿಕಲ್ಪನೆ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಕನ್ನಡ ಮತ್ತು ಸಂಸ್ಕರತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಸ್ವಾಗತಿಸಿದರು. ಮಹಾನಗರಪಾಲಿಕೆ ಮಹಾಪೌರರಾದ ಶೋಭಾ ಪಲ್ಲಾಗಟ್ಟೆ, ಉಪ ಮಹಾಪೌರರಾದ ಕೆ.ಚಮನ್‍ಸಾಬ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಜೆ ನಾಗರಾಜ್, ಎಎಸ್ಪಿ ಉದೇಶ್, ದಾವಣಗೆರೆ ಉಪವಿಭಾಗಾಧಿಕಾರಿ ಸಿದ್ದೇಶ್ ಹಾಜರಿದ್ದರು. ಕರವೇ  ಜಿಲ್ಲಾಧ್ಯಕ್ಷ ರಾಮೇಗೌಡ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X