ಹಿರಿಯಡ್ಕ ಸರಕಾರಿ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

ಉಡುಪಿ, ಜೂ.27: ಹಿರಿಯಡಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯುಎಸಿ) ವತಿಯಿಂದ ಕಾಲೇಜಿಗೆ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಮಂಗಳವಾರ ಕಾಲೇಜಿನಲ್ಲಿ ನಡೆಯಿತು.
ಅಜ್ಜರಕಾಡು ಸರಕಾರಿ ಮಹಿಳಾಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಹಾಗೂ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ಸೋಜನ್ ಕೆ.ಜಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಯದ ಸದ್ಭಳಕೆ, ಸ್ವನಂಬಿಕೆ ಹಾಗೂ ಸತತ ಪರಿಶ್ರಮದಿಂದ ಗುರಿಯನ್ನು ತಲುಪಲು ಸಾಧ್ಯವೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ನಿಕೇತನ ಮಾತನಾಡಿ, ಸಕಾರಾತ್ಮಕ ಚಿಂತನೆ ಹಾಗೂ ಉತ್ತಮ ನಡವಳಿಕೆಯಿಂದವ್ಯಕ್ತಿತ್ವ ರೂಪಿಸಿಕೊಂಡರೆ ,ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬಾಳಲು ಸಾಧ್ಯ ಎಂದರು.
ಕಾಲೇಜಿನ ಸಹಾಯಕ ಪ್ರಾಧ್ಯಾಪಕ ದಿನೇಶ್ ಎಂ., ಸುಬಾಷ್ ಹೆಚ್.ಕೆ., ಡಾ.ರಾಘವೇಂದ್ರ ಪಿ. ಕೆ., ಸುಜಯಾ ಕೆ.ಎಸ್. ಉಪಸ್ಥಿತರಿದ್ದರು. ಕಾಲೇಜಿನ ಐಕ್ಯುಎಸಿ ಸಂಚಾಲಕಿ ಹಾಗೂ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಸುಮನ ಬಿ. ಸ್ವಾಗತಿಸಿ, ಆಂಗ್ಲಬಾಷಾ ಸಹಾಯಕ ಪ್ರಾ್ಯಾಪಕ ಪ್ರವೀಣ್ ಶೆಟ್ಟಿ ವಂದಿಸಿದರು.







