ಪ್ರಕೃತಿ ಚಿಕಿತ್ಸಾಲಯದಿಂದ ಸಿದ್ದರಾಮಯ್ಯ ಡಿಸ್ಜಾರ್ಜ್
ಮಂಗಳೂರು, ಜೂ.28: ಧರ್ಮಸ್ಥಳದ ಶಾಂತಿವನದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಬುಧವಾರ ಬಿಡುಗಡೆಗೊಂಡಿದ್ದಾರೆ.
12 ದಿನಗಳ ಚಿಕಿತ್ಸೆಯ ಬಳಿಕ ಮತ್ತೆ ಸಿದ್ದರಾಮಯ್ಯ ಅವರು ವಾಪಸಾಗುತ್ತಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಪ್ರಕೃತಿ ಚಿಕಿತ್ಸಾಲಯದಿಂದ ಹೊರ ಬಂದ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಸಿದ್ದರಾಮಯ್ಯ ಅವರು ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರನ್ನು ಸಚಿವರು, ಮಾಜಿ ಸಚಿವರು ಮತ್ತು ಶಾಸಕರು ಭೇಟಿಯಾಗಿದ್ದರು. ಶಾಂತಿವನದಲ್ಲಿದ್ದಾಗ ರಾಜ್ಯ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯನವರು, ಗುರುವಾರ ಬೆಂಗಳೂರಿಗೆ ತೆರಳುವ ಸಾಧ್ಯತೆ ಇದೆ. ಅವರು ಆಗಮಿಸಿದ ಬಳಿಕ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಲಿದೆ.
Next Story