ಜೂ.30: ಬ್ಯಾರೀಸ್ ಶಿಕ್ಷಣ ಸಂಸ್ಥೆ ಇನೋಳಿಯಲ್ಲಿ ಪದವಿ ಪ್ರದಾನ ಸಮಾರಂಭ
ಕೊಣಾಜೆ, ಜೂ. 28: ಇನೋಳಿಯ ಬ್ಯಾರೀಸ್ ತಾಂತ್ರಿಕ ಶಿಕ್ಷಣ ಸಂಸ್ಥೆಯ 6 ನೇ ವರ್ಷದ ಪದವಿ ಪ್ರದಾನ ಸಮಾರಂಭವು ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ಜೂ.30 ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ನಿಟ್ಟೆ ವಿಶ್ವವಿದ್ಯಾಲಯದ ಪ್ರೊ.ಶಾಂತರಾಮ ಶೆಟ್ಟಿ ಅವರು ನೆರವೇರಿಸಲಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಡಾ.ಎ.ಶ್ರೀಧರನ್ , ಮಂಗಳೂರು ಎಮ್ ಆರ್‌ಪಿಎಲ್‌ನ ವೆಂಕಟೇಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಸೈಯ್ಯದ್ ಮುಹಮ್ಮದ್ ಬ್ಯಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
Next Story





