ಸಿದ್ದರಾಮಯ್ಯ-ಮಲ್ಲಿಕಾರ್ಜುನ ಖರ್ಗೆ ಜೂ.29 ರಂದು ಸಮಾಲೋಚನೆ

ಬೆಂಗಳೂರು, ಜೂ. 28: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರಕಾರದ ಹೊಸ ಬಜೆಟ್ ಮಂಡನೆಗೆ ಆಕ್ಷೇಪ ವ್ಯಕ್ತಪಡಿಸಿ, ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಅಚ್ಚರಿ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ನಾಳೆ(ಜೂ.29) ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಚರ್ಚಿಸಲಿದ್ದಾರೆ.
ಹನ್ನೆರಡು ದಿನಗಳಿಂದ ಧರ್ಮಸ್ಥಳದ ಶ್ರೀಮಂಜುನಾಥ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ವಿಶ್ರಾಂತಿ ಪಡೆದು ಬೆಂಗಳೂರಿಗೆ ಗುರುವಾರ ರಾತ್ರಿ ಆಗಮಿಸಿದ ಸಿದ್ದರಾಮಯ್ಯನವರೊಂದಿಗೆ, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಖರ್ಗೆ ಭೇಟಿ ಮಾಡಲಿದ್ದಾರೆಂದು ಗೊತ್ತಾಗಿದೆ.
ಮೈತ್ರಿಕೂಟ ಸರಕಾರದ ಮೇಲೆ ಆವರಿಸಿರುವ ಕರಿ ನೆರಳನ್ನು ದೂರ ಮಾಡುವ ದೃಷ್ಟಿಯಿಂದ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ಅವರ ಅಸಮಾಧಾನ ನಿವಾರಣೆಗೆ ಮಲ್ಲಿಕಾರ್ಜುನ ಖರ್ಗೆ ಪ್ರಯತ್ನ ನಡೆಸುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
Next Story





