Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀರವ್ ಮೋದಿ ಹಗರಣದಲ್ಲಿ 54 ಅಧಿಕಾರಿಗಳು...

ನೀರವ್ ಮೋದಿ ಹಗರಣದಲ್ಲಿ 54 ಅಧಿಕಾರಿಗಳು ತಪ್ಪಿತಸ್ತರು: ಪಿಎನ್‌ಬಿಯ ಆಂತರಿಕ ತನಿಖಾ ವರದಿ

ವಾರ್ತಾಭಾರತಿವಾರ್ತಾಭಾರತಿ28 Jun 2018 8:42 PM IST
share
ನೀರವ್ ಮೋದಿ ಹಗರಣದಲ್ಲಿ 54 ಅಧಿಕಾರಿಗಳು ತಪ್ಪಿತಸ್ತರು: ಪಿಎನ್‌ಬಿಯ ಆಂತರಿಕ ತನಿಖಾ ವರದಿ

ಹೊಸದಿಲ್ಲಿ, ಜೂ.28: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‌ಬಿ)ನಲ್ಲಿ ಬೆಳಕಿಗೆ ಬಂದ 14,000 ಕೋಟಿ ರೂ. ಮೊತ್ತದ ಹಗರಣದ ಬಗ್ಗೆ ಸಲ್ಲಿಸಲಾದ ಆಂತರಿಕ ತನಿಖಾ ವರದಿಯಲ್ಲಿ ಬ್ಯಾಂಕಿನ ಆಡಳಿತ , ಪ್ರಾದೇಶಿಕ ಮತ್ತು ವೃತ್ತ ಕಚೇರಿಯ ಅಧಿಕಾರಿಗಳು, ಖಜಾನೆ ಮತ್ತು ಫೋರೆಕ್ಸ್ ವಿಭಾಗದ ಅಧಿಕಾರಿಗಳು, ಅಂತಾರಾಷ್ಟ್ರೀಯ ಬ್ಯಾಂಕಿಂಗ್ ವಿಭಾಗದ ಅಧಿಕಾರಿಗಳು, ನಿಯಮದ ವ್ಯಾಪಕ ಉಲ್ಲಂಘನೆಯಾಗಿದ್ದರೂ ಅದನ್ನು ಕಡೆಗಣಿಸಿದ ಆಡಿಟರ್‌ಗಳು ಸೇರಿದಂತೆ 54 ಅಧಿಕಾರಿಗಳು ತಪ್ಪೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

 ಅಲ್ಲದೆ ಇಷ್ಟೊಂದು ಬೃಹತ್ ಪ್ರಮಾಣದ ಅನರ್ಥ ಸಂಭವಿಸಲು ಅಧಿಕಾರಿಗಳ ನಿಯಮಮೀರಿದ ನಡವಳಿಕೆ ಹಾಗೂ ಕರ್ತವ್ಯಲೋಪ ಪ್ರಮುಖ ಕಾರಣವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಪಿಎನ್‌ಬಿಯಲ್ಲಿ 1.14 ಲಕ್ಷ ಕೋಟಿ ವೌಲ್ಯದ 1804 ‘ಬಿಲ್ ಆಫ್ ಎಂಟ್ರಿ (ಬಿಒಇ)’ ಪ್ರಕರಣಗಳು ಇತ್ಯರ್ಥವಾಗಲು ಬಾಕಿ ಇದ್ದು ಇದರಲ್ಲಿ ನೀರವ್ ಮೋದಿ ಮಾಲಕತ್ವದ ಫೈರ್‌ಸ್ಟಾರ್ ಗ್ರೂಪ್ ಮತ್ತು ಮೆಹುಲ್ ಚೋಕ್ಸಿಯ ಗೀತಾಂಜಲಿ ಗ್ರೂಪ್ ಸಂಸ್ಥೆಯ 99,031 ಕೋಟಿ ಬಿಒಇ ಬಾಕಿ ಉಳಿದಿದೆ. 2010ರಿಂದ 2017ರ ಅವಧಿಯಲ್ಲಿ ಬ್ಯಾಂಕಿನ ವೃತ್ತ ಕಚೇರಿಯ ಹಲವು ಹಿರಿಯ ಅಧಿಕಾರಿಗಳು ಶಾಖಾ ಕಚೇರಿಗೆ ಭೇಟಿ ನೀಡಿದ್ದರೂ ಯಾವುದೇ ಅಧಿಕಾರಿ ಡಿಎಂಎಸ್(ಡೈಲಿ ಮಾನಿಟರಿಂಗ್ ಸಿಸ್ಟಮ್) ವರದಿಯ ಕುರಿತು ಅಥವಾ ಅನಧಿಕೃತ ವ್ಯವಹಾರದ ಬಗ್ಗೆ ಉಲ್ಲೇಖಿಸಿಲ್ಲ ಎಂದು ವರದಿ ತಿಳಿಸಿದೆ.

ಇದೇ ರೀತಿ ಆಡಿಟ್ (ಲೆಕ್ಕಪತ್ರ ಪರಿಶೋಧನೆ) ವರದಿಯಲ್ಲೂ ಯಾವುದೇ ಅವ್ಯವಹಾರದ ಬಗ್ಗೆ ತಿಳಿಸಲಾಗಿಲ್ಲ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಪಿಎನ್‌ಬಿಯ 10 ಶಾಖಾ ಮುಖ್ಯಸ್ಥರು, 7 ವೃತ್ತ ಕಚೇರಿ ಮುಖ್ಯಸ್ಥರು, 5 ಪ್ರಾದೇಶಿಕ ಕಚೇರಿಯ ಮುಖ್ಯಸ್ಥರು, 5 ಆಡಿಟರ್‌ಗಳು, ಫಾರೆಕ್ಸ್ ವಿಭಾಗದ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಏಕಗವಾಕ್ಷಿ ವಿಭಾಗದ ನಿರ್ವಾಹಕರು ಸೇರಿದಂತೆ ಒಟ್ಟು 54 ಅಧಿಕಾರಿಗಳನ್ನು ಆರೋಪಿಗಳ ಪಟ್ಟಿಯಲ್ಲಿ ಸೇರಿಸಿದೆ.

ಇವರಲ್ಲಿ ಗೋಕುಲ್‌ನಾಥ್ ಶೆಟ್ಟಿ, ಬೆಚು ತಿವಾರಿ, ಮನೋಜ್ ಖಾರಟ್ ಮತ್ತು ಯಶವಂತ್ ಜೋಷಿ ಸೇರಿದಂತೆ ಎಂಟು ಅಧಿಕಾರಿಗಳನ್ನು ಸಿಬಿಐ ಬಂಧಿಸಿದೆ. ಈ ಮಧ್ಯೆ ಮಾಧ್ಯಮದ ಜೊತೆ ಮಾತನಾಡಿದ ಮೆಹುಲ್ ಚೋಕ್ಸಿಯ ವಕೀಲರು, ಪಿಎನ್‌ಬಿಯ ಆಂತರಿಕ ವರದಿ ವಾಸ್ತವವಾಗಿ ಚೋಕ್ಸಿಗೆ ಕ್ಲೀನ್ ಚಿಟ್ ನೀಡಿದಂತಾಗಿದೆ. ಬ್ಯಾಂಕ್‌ನಲ್ಲೇ ಅವ್ಯವಸ್ಥೆ ಇದೆ ಎಂದು ವರದಿ ತಿಳಿಸಿದೆ. ಇದರರ್ಥ, ವಂಚನೆ ನಡೆದೇ ಇಲ್ಲ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X