Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಸ್ಕಾರ್ಫ್ ವಿವಾದ ಬಗೆಹರಿಸುವ...

ಮಂಗಳೂರು: ಸ್ಕಾರ್ಫ್ ವಿವಾದ ಬಗೆಹರಿಸುವ ಬಗ್ಗೆ ಮುಸ್ಲಿಂ ಮುಖಂಡರ ಸಭೆ

ವಾರ್ತಾಭಾರತಿವಾರ್ತಾಭಾರತಿ28 Jun 2018 10:20 PM IST
share
ಮಂಗಳೂರು: ಸ್ಕಾರ್ಫ್ ವಿವಾದ ಬಗೆಹರಿಸುವ ಬಗ್ಗೆ ಮುಸ್ಲಿಂ ಮುಖಂಡರ ಸಭೆ

ಮಂಗಳೂರು, ಜೂ. 28: ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ಭುಗಿಲೆದ್ದ ಸ್ಕಾರ್ಫ್ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಮಂಗಳೂರಿನ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಮುಸ್ಲಿಂ ಮುಖಂಡರ ನೇತೃತ್ವದಲ್ಲಿ ಗುರುವಾರ ಸಂಜೆ ವಿದ್ಯಾರ್ಥಿನಿಯರು ಮತ್ತು ಪೋಷಕರೊಂದಿಗೆ ಸಭೆ ನಡೆಸಲಾಯಿತು.

ಸಭೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಕಾಲೇಜಿನಲ್ಲಿ ನಡೆದಂತಹ ಎಲ್ಲ ಘಟನೆಗಳ ಬಗ್ಗೆ ವಿದ್ಯಾರ್ಥಿನಿಯೋರ್ವಳು ಮಾತನಾಡಿ, ‘ಕಾಲೇಜಿನಲ್ಲಿ ಇಷ್ಟರವರೆಗೆ ಇಲ್ಲದಂತಹ ಕೆಲವು ನಿಯಮಗಳನ್ನು ವಿದ್ಯಾರ್ಥಿನಿಯರ ಮೇಲೆ ಹೇರುತ್ತಿದ್ದು, ಸ್ಕಾರ್ಫ್ ಮತ್ತು ನಮಾಝ್ ನಿರ್ವಹಿಸಲು ಕೂಡ ಪ್ರಾಂಶುಪಾಲರು ಅಡ್ಡಿಪಡಿಸುತ್ತಿದ್ದಾರೆ. ಈ ಕುರಿತು ನಾವು ಕೇಳಲು ಹೋದಾಗ ನಮ್ಮನ್ನು ಗಣನೆಗೆ ತೆಗೆಯದೆ ಹೆದರಿಸುವಂತಹ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಇದೀಗ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳ ಮೇಲೆ ಕೆಲವೊಂದು ನೋಟಿಸ್‌ಗಳನ್ನು ನೀಡಿ, ನಮ್ಮ ಕ್ಯಾಲೆಂಡರ್‌ಗಳನ್ನು ಹಿಂಪಡೆದು, ಕಿರುಕುಳ ನೀಡುತ್ತಿದ್ದಾರೆ ಎಂದು ಮುಖಂಡರ ಬಳಿ ಅಳಲನ್ನು ತೋಡಿಕೊಂಡರು.

ವಿದ್ಯಾರ್ಥಿನಿಯರು ವಿವರಿಸಿದ ಘಟನೆಗಳ ಆಧಾರದಲ್ಲಿ, ಮುಖಂಡರು ಗಂಭೀರ ಚರ್ಚೆಯನ್ನು ನಡೆಸಿ, ಈ ವಿವಾದವನ್ನು ಸೂಕ್ತ ರೀತಿಯಲ್ಲಿ ಬಗೆಹರಿಸುವ ನಿಟ್ಟಿನಲ್ಲಿ ಕೆಲವೊಂದು ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

ನಿರ್ಧಾರಗಳು:

ಈಗಾಗಲೇ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಮನವಿಯ ಮೂಲಕ ಮಾಹಿತಿ ನೀಡಲಾಗಿದ್ದು, ಜಿಲ್ಲೆಯ ಸಚಿವ ಯು.ಟಿ ಖಾದರ್ ಅವರು ಈ ಎಲ್ಲ ಅಧಿಕಾರಿಗಳನ್ನು ಮತ್ತು ವಿದ್ಯಾರ್ಥಿನಿಯರನ್ನು ಹಾಗೂ ಪೋಷಕರನ್ನು ಸೇರಿಸಿಕೊಂಡು ಕಾಲೇಜು ಆಡಳಿತ ಮಂಡಳಿಯೊಂದಿಗೆ ಸಭೆ ಕರೆಯುವ ಬಗ್ಗೆ ಒತ್ತಾಯಿಸುವುದು.

ಮಂಗಳೂರು ಪೋಲಿಸ್ ವರಿಷ್ಠಾಧಿಕಾರಿ ಕೂಡ ಈ ಬಗ್ಗೆ ಮಧ್ಯಸ್ಥಿಕೆ ವಹಿಸಿ ವಿವಾದವನ್ನು ಮುಗಿಸುವ ಬಗ್ಗೆ ಪ್ರಯತ್ನಿಸಬೇಕು. ಈ ಎಲ್ಲ ಬೆಳವಣಿಗೆಯಲ್ಲಿ ಕಾಲೇಜು ಆಡಳಿತ ಮಂಡಳಿಯು ಸ್ಪಂದಿಸದಿದ್ದಲ್ಲಿ, ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ಮುಸ್ಲಿಂ ಮುಖಂಡರನ್ನು ಒಗ್ಗೂಡಿಸಿ ಬೃಹತ್ ಹೋರಾಟವನ್ನು ನಡೆಸಲಾಗುವುದು ಎಂದು ತೀರ್ಮಾನಿಸಲಾಯಿತು.

ಸಭೆಯಲ್ಲಿ ಮುಸ್ಲಿಂ ಮುಖಂಡರಾದ ಮಾಜಿ ಮೇಯರ್ ಅಶ್ರಫ್, ಸುಹೈಲ್ ಖಂದಕ್, ಹನೀಫ್ ಖಾನ್ ಕೋಡಾಜೆ, ರಫೀಯುದ್ದೀನ್ ಕುದ್ರೋಳಿ, ಅತಾವುಲ್ಲಾ ಜೋಕಟ್ಟೆ, ನವಾಝ್ ಉಳ್ಳಾಲ, ನಝೀರ್ ಅಹ್ಮದ್, ಇಕ್ಬಾಲ್ ಮುಲ್ಕಿ, ಮುಹಮ್ಮದ್ ಸಲೀಂ, ಜಾಫರ್ ಸಾದಿಕ್ ಫೈಝಿ, ಮುಹಮ್ಮದ್ ತಫ್ಸೀರ್, ಮುನೀಬ್ ಬೆಂಗ್ರೆ , ರಶೀದ್ , ಅಹ್ಮದ್ ಬಾವ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X