Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಲ ಮನ್ನಾ ಘೋಷಣೆಯಿಂದ ಹಿಂದೆ ಸರಿಯುವ...

ಸಾಲ ಮನ್ನಾ ಘೋಷಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ

ವಾರ್ತಾಭಾರತಿವಾರ್ತಾಭಾರತಿ28 Jun 2018 10:38 PM IST
share
ಸಾಲ ಮನ್ನಾ ಘೋಷಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ

ಚಿಕ್ಕಮಗಳೂರು, ಜೂ.28: ಸಮಿಶ್ರ ಸರಕಾರ ಐದು ವರ್ಷ ಅವಧಿ ಪೂರ್ಣಗೊಳಿಸುತ್ತದೆ. ಸಾಲಮನ್ನಾದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಜುಲೈ 5ರಂದು ಮುಖ್ಯಮಂತ್ರಿ ಮಂಡಿಸುವ ಬಜೆಟ್‍ನಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಹೇಳಿದರು.

ವಿಧಾನ ಪರಿಷತ್‍ಗೆ ಆಯ್ಕೆಯಾಗಿರುವ ಎಸ್.ಎಲ್. ಧರ್ಮೇಗೌಡ ಹಾಗೂ ಬೋಜೇಗೌಡರವರಿಗೆ ಗುರುವಾರ ನಗರದ ಒಕ್ಕಲಿಗರ ಭವನದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. 'ಬುದ್ಧಿಜೀವಿಗಳ ಸದನ ಎಂದೇ ಬಿಂಬಿತವಾಗಿರುವ ವಿಧಾನ ಪರಿಷತ್‍ಗೆ ಸಹೋದರಿಬ್ಬರು ಆಯ್ಕೆಯಾಗಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯ. ಜೆಡಿಎಸ್ ಭದ್ರಕೋಟೆ ಎಂದೆ ಬಿಂಬಿತವಾಗಿದ್ದ ಚಿಕ್ಕಮಗಳೂರು ಜಿಲ್ಲೆ ಸಹೋದರರಿಬ್ಬರ ಆಯ್ಕೆಯಿಂದ ಮತ್ತೊಮ್ಮೆ ಜೆಡಿಎಸ್ ಭದ್ರಕೋಟೆಯಾಗಲಿದೆ. ಮಾಜಿ ಶಾಸಕ ದಿ. ಲಕ್ಷ್ಮಯ್ಯರವರು ಶಿಕ್ಷಕರಾಗಿ, ಶಾಸಕರಾಗಿ ಕೆಲಸ ಮಾಡಿದ್ದಾರೆ. ಅವರ ಪುತ್ರರಾದ ಸಹೋದರು ವಿಧಾನ ಪರಿಷತ್ ಆಯ್ಕೆಯಾಗುವುದರೊಂದಿಗೆ ಲಕ್ಷ್ಮಯ್ಯರವರ ಕುಟುಂಬಕ್ಕೆ ಗೌರವ ತಂದಿದ್ದಾರೆ ಎಂದರು.

ಮಾಜಿ ಶಾಸಕ ಬಿ.ಬಿ.ನಿಂಗಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿರವರು ಎಸ್.ಎಲ್.ಧರ್ಮೇಗೌಡ ಅವರಿಗೆ ನಿನ್ನನ್ನು ವಿಧಾನಪರಿಷತ್ ಸದಸ್ಯನನ್ನಾಗಿ ಮತ್ತು ಮಂತ್ರಿಯನ್ನಾಗಿ ಮಾಡುವುದಾಗಿ ಹೇಳಿದ್ದ ಮಾತಿನಂತೆ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದಾರೆ. ಜೆಡಿಎಸ್‍ನ ಜಿಲ್ಲಾ ಮುಖಂಡರ ನಿಯೋಗ ಮುಖ್ಯಮಂತ್ರಿಗಳ ಬಳಿ ತೆರಳಿ ಧರ್ಮೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಬೇಕು ಎಂದರು.

ಸ್ವಾಗತ ಸಮಿತಿಯ ಅಧ್ಯಕ್ಷ ಹೆಚ್.ಹೆಚ್.ದೇವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಧರ್ಮೇಗೌಡ ಮತ್ತು ಭೋಜೇಗೌಡರು ಜಿಲ್ಲೆಯಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು, ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ದುಡಿಯಬೇಕು ಎಂದರು.

ಅಭಿನಂದನೆ ಸ್ವೀಕರಿಸಿದ ಧರ್ಮೇಗೌಡ  ಮಾತನಾಡಿ, ಜಿಲ್ಲೆಯ ಬಯಲು ಸೀಮೆಗೆ ನೀರೊದಗಿಸುವ ಕರಗಡ ಕುಡಿಯುವ ನೀರಿನ ಯೋಜನೆಯ 2ನೇ ಹಂತದ ಕಾಮಗಾರಿಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ 20 ಕೋಟಿ ರೂ. ಹಣ ಬಿಡುಗಡೆ ಮಾಡಿಸುವುದಾಗಿ ಭರವಸೆ ನೀಡಿದರು.

ಭೋಜೇಗೌಡ ಮಾತನಾಡಿ, ಅಭಿಮಾನಿಗಳು, ಶಿಕ್ಷಕರು ಮತ್ತು ಜಿಲ್ಲೆಯ ಜನರ ನಿರೀಕ್ಷೆಗೆ ತಕ್ಕಂತೆ ಪ್ರಾಮಾಣಿಕವಾಗಿ ಮತ್ತು ಪಕ್ಷಾತೀತವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಎಸ್.ಎಲ್.ಧರ್ಮೇಗೌಡ ಮತ್ತು ಜೆಡಿಎಸ್ ರಾಜ್ಯ ವಕ್ತಾರ ಎಸ್.ಎಲ್.ಭೋಜೇಗೌಡ ಸಹೋದರರನ್ನು ಅಭಿನಂದಿಸಲಾಯಿತು.

ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‍ಕುಮಾರ್ ಅಧ್ಯಕ್ಷತೆ ವಹಿಸಿದ್ದರು, ಪಕ್ಷದ ಮುಖಂಡರಾದ ಎಂ.ಎಸ್.ಬಾಲಕೃಷ್ಣೇಗೌಡ, ಹೆಚ್.ಜಿ.ವೆಂಕಟೇಶ್, ಹೆಚ್.ಟಿ.ರಾಜೇಂದ್ರ, ಮಂಜಪ್ಪ, ಚಂದ್ರಪ್ಪ, ಜಮೀಲ್ ಅಹಮದ್, ಉಮಾಪತಿ, ಚಂದ್ರೇಗೌಡ, ವಸಂತ ಕುಮಾರಿ, ಜ್ಯೋತಿ ಈಶ್ವರ್, ಪದ್ಮಾ ತಿಮ್ಮೇಗೌಡ, ಮಾನು ಮಿರಾಂಡ, ವಿನಯ್ ಕೋಟೆ, ಭೈರೇಗೌಡ, ಡಿ.ಜೆ.ಸುರೇಶ್, ನಿಸಾರ್ ಅಹಮದ್, ಹೆಚ್.ಸಿ.ಕೃಷ್ಣೇಗೌಡ, ಎಂ.ನರೇಂದ್ರ, ಹೊಲದಗದ್ದೆ ಗಿರೀಶ್, ಎಂ.ಡಿ.ರಮೇಶ್, ದಿನೇಶ್, ಆನಂದ ನಾಯ್ಕ ಇದ್ದರು. 

ಅಭಿನಂದನೆಯ ಮಹಾಪೂರ: ಎಸ್.ಎಲ್.ಡಿ ಮತ್ತು ಎಸ್.ಎಲ್.ಬಿ ಸಹೋದರರನ್ನು ಅಭಿನಂದಿಸಲು ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿ ಬೆಳಗಿನಿಂದ ಕಾದು ನಿಂತಿದ್ದ ಪಕ್ಷದ ಪದಾಧಿಕಾರಿಗಳು, ನೂರಾರು ಕಾರ್ಯಕರ್ತರು, ಅಭಿಮಾನಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಮುಖಂಡರು ಕಾರ್ಯಕ್ರಮದ ನಡುವೆಯೇ ಸಂಘಟಕರ ತಡೆಯನ್ನೂ ಲೆಕ್ಕಿಸದೆ ವೇದಿಕೆಗೆ ತೆರಳಿ ಸಹೋದರರನ್ನು ಅಭಿನಂದಿಸಿದರು. 

ಸಹೋದರಿಬ್ಬರು ವಿಧಾನ ಪರಿಷತ್‍ಗೆ ಆಯ್ಕೆಯಿಂದ ಜೆಡಿಎಸ್‍ಗೆ ಆನೆಬಲ ಬಂದಿದೆ. ಮುಂಬರುವ ಲೋಕಸಭೆ ಹಾಗೂ ಸ್ಥಳೀಯ ಚುನಾವಣೆಗೆ ಜೆಡಿಎಸ್ ಪಕ್ಷ ಬಲಪಡಿಸಲು ಕಾರ್ಯಕರ್ತರು ಶಕ್ತಿಮೀರಿ ಪಕ್ಷ ಸಂಘಟಿಸಬೇಕು.
-ಎಚ್.ಎಚ್.ದೇವರಾಜ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X